ಮೈಸೂರು : ರಾಜ್ಯ ಸರ್ಕಾರವು ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಲು ಮುಂದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ವೈದ್ಯರ ಹಾಜರಾತಿ ಮೇಲೆ ನಿಗಾ ಇಡಲು ಮತ್ತು ಸರ್ಕಾರಿ ವೈದ್ಯರು ಖಾಸಗಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಕಡಿವಾಣ ಹಾಕಲು ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿಂತಿಸಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು, ಇದಕ್ಕಾಗಿ ಬಯೋಮೆಟ್ರಿಕ್ ಪದ್ಧತಿ ಜಾರಿಗೆ ತರಲಾಗುವುದು. ಆಗ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ವೈದ್ಯರು ಬಯೋಮೆಟ್ರಿಕ್ ಮಾಡಬೇಕು ಎಂದು ಹೇಳಿದ್ದಾರೆ.