ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು 2022-23ನೇ ಸಾಲಿನ ನೇಮಕಾತಿಗೂ ಕೂಡಾ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.
ಆದೇಶದ ಪ್ರಕಾರ ವಯಸ್ಸು 25ರಿಂದ 27ವರ್ಷಕ್ಕೆ ಎಸ್ಸಿ ಎಸ್ಟಿ ಮತ್ತು ಹಿಂದುಳಿದ ವರ್ಗಕ್ಕೆ 27ರಿಂದ 29ಕ್ಕೆ ಹಾಗೂ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30ರಿಂದ 32ಕ್ಕೆ ಏರಿಕೆ ಆಗಲಿದೆ. ಅಭ್ಯರ್ಥಿಗಳು ವಯಸ್ಸಿನ ಕಾರಣಕ್ಕೆ ಅರ್ಜಿ ಸಲ್ಲಿಸುವ ಅವಕಾಶದಿಂದ ವಂಚಿತರಾಗಿದ್ದರು. ಹೀಗಾಗಿ ವಯೋಮಿತಿ ಹೆಚ್ಚಳಕ್ಕೆ ಸಾಕಷ್ಟು ಮನವಿ ಬಂದಿತ್ತು. ಈಗ ಅದನ್ನು ಪರಿಗಣಿಸಿ ಹೊಸ ಆದೇಶವನ್ನು ಹೊರಡಿಸಲಾಗಿದೆ.