ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ ಗೆಲವು ದೊರೆತಂತಾಗಿದೆ.
ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ ಸರ್ವೇ ನಡೆಸಬೇಕು ಎಂದು ವಿಎಚ್ಪಿ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ವಿಎಚ್ಪಿ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಾಲಯವು ವಿಚಾರಣೆಯನ್ನು ಜನವರಿ 8, 2023ಕ್ಕೆ ಮುಂದೂಡಿದೆ.