Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೂವಿನ ಅಂಗಡಿಯ ಶಟರ್‌ ಮುರಿದು 9 ಲಕ್ಷ ರೂ.ನಗದು ಕಳವು
    ಇತ್ತೀಚಿನ ಸುದ್ದಿ

    ಮಂಗಳೂರು: ಹೂವಿನ ಅಂಗಡಿಯ ಶಟರ್‌ ಮುರಿದು 9 ಲಕ್ಷ ರೂ.ನಗದು ಕಳವು

    November 18, 2022
    Share

    ಮಂಗಳೂರು: ನಗರದ ಕೆ.ಎಸ್‌. ರಾವ್‌ ರಸ್ತೆಯ ನಲಪಾಡ್‌ ಅಪ್ಸರಾ ಚೇಂಬರ್ಸ್‌ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ 9 ಲಕ್ಷ ರೂ. ಕಳವಾಗಿದೆ. ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಅಂಗಡಿಯಾಗಿದ್ದು, ಕಳೆದ 12 ವರ್ಷಗಳಿಂದ ಹೋಲ್‌ಸೇಲ್‌ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು.

    ಅವರು ಪ್ರತಿನಿತ್ಯ ವ್ಯಾಪಾರದ ಹಣ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಬುಧವಾರ ಹೂವಿನ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಟೇಬಲ್‌ನ ಡ್ರಾವರ್‌ನಲ್ಲಿ ಇಟ್ಟು ಲಾಕ್‌ ಮಾಡಿ ಸಂಜೆ 6 ಗಂಟೆಗೆ ಆಂಗಡಿ ಮುಚ್ಚಿ ತೆರೆಳಿದ್ದರು.

    ಗುರುವಾರ ಬೆಳಗ್ಗೆ 6 ಗಂಟೆಗೆ ಅವರ ಮಗ ರಿಯಾಜ್‌ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್‌ನ ಸೆಂಟರ್‌ ಲಾಕ್‌ ಮುುರಿದಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರು ಉಮರಬ್ಬ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಬಂದು ಅಂಗಡಿಯ ಶಟರ್‌ ಬಾಗಿಲನ್ನು ಮೇಲಕ್ಕೆತ್ತಿ ಒಳಗಡೆ ನೋಡಿದಾಗ ಟೇಬಲ್‌ನ ಡ್ರಾವರ್‌ ಲಾಕ್‌ ಮುರಿದು ಅದರಲ್ಲಿದ್ದ 9 ಲಕ್ಷ ರೂ. ಕಳವು ಮಾಡಿರುವುದು ಕಂಡುಬಂದಿದೆ.

    Post Views: 158

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.