ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರೈಲ್ವೆ ಪೊಲೀಸ್ ಎಸ್ಪಿ ಹುದ್ದೆಗೆ ಡಾ.ಎಸ್.ಕೆ.ಸೌಮ್ಯಲತಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ರೈಲ್ವೆ ಎಸ್ಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಿ.ಆರ್.ಸಿರಿಗೌರಿ ಅವರನ್ನು ವರ್ಗಾವಣೆ ಮಾಡಲಾಗಿದೆ.ಬೆಂಗಳೂರು ನಗರದ ಸಂಚಾರ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರ ಹುದ್ದೆಗೆ ಸಚ್ಚಿನ್ ಘೋರ್ಪಡೆ ಅವರನ್ನು , ಅಪರಾಧ ತನಿಖಾ ವಿಭಾಗದ ಎಸ್ಪಿ ಹುದ್ದೆಗೆ ಎಸ್.ಸವಿತಾ, ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಉಪ ಪ್ರಾಂಶುಪಾಲ ಹುದ್ದೆಗೆ ಡಾ.ಕೆ.ಅರುಣ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.