ಮುಲ್ಕಿ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆ 778 ಪ್ರವಾಸಿತಾಣ ಗುರುತಿಸಿದ್ದು ಅದರಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಮಂಗಳೂರಿನ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಪ್ರವಾಸಿ ತಾಣವಾಗಿ ಸೇರ್ಪಡೆಯಾಗಿದೆ.
ಈ ಪ್ರವಾಸಿ ತಾಣಗಳಲ್ಲಿ ಅಗತ್ಯವಿರುವ ಯಾತ್ರಿ ನಿವಾಸ ಅಥವಾ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧೀನ ಕಾರ್ಯದರ್ಶಿ ವಿಮಲಾ ಬಿ. ತಮ್ಮ ಆದೇಶದಲ್ಲಿ ಹೊರಡಿಸಿದ್ದಾರೆ.