ಚೆನ್ನೈ: ತಮಿಳುನಾಡಿನಾದ್ಯಂತದ ದೇವಾಲಯಗಳಲ್ಲಿ ಮೊಬೈಲ್ ಫೋನ್ ಗಳನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಪರಿಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು ಎಂದು ನ್ಯಾಯಾಲಯ ಹೇಳಿದೆ.
ಜನರಿಗೆ ಅನಾನುಕೂಲವಾಗುವುದನ್ನು ತಪ್ಪಿಸಲು, ದೇವಾಲಯಗಳಲ್ಲಿ ಫೋನ್ ಡೆಪಾಸಿಟ್ ಲಾಕರ್ ಗಳನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿಯನ್ನು ಸಹ ನೇಮಕ ಮಾಡಬೇಕು ಎನ್ನಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ.ಸತ್ಯ ನಾರಾಯಣ ಪ್ರಸಾದ್ ಅವರು, ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ದೇವಾಲಯದ ಪಾವಿತ್ರ್ಯವನ್ನು ಕಾಪಾಡಲು ದೇವಾಲಯದ ಆವರಣದಲ್ಲಿ ಸೆಲ್ ಫೋನ್ ಬಳಕೆಯನ್ನು ನಿಷೇಧಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಫೋನ್ ಗಳು ಮತ್ತು ಕ್ಯಾಮೆರಾಗಳ ಬಳಕೆಯು ಭಕ್ತರ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ ಅಂತ ಹೇಳಿದೆ.
ದೇಶಾದ್ಯಂತದ ದೇವಾಲಯಗಳಲ್ಲಿ (ಉದಾಹರಣೆಗೆ: ಗುರುವಾಯೂರಿನ ಶ್ರೀ ಕೃಷ್ಣ ದೇವಾಲಯ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಾಲಯ) ಮೊಬೈಲ್ ಫೋನ್ಗಳ ಮೇಲಿನ ನಿಷೇಧವನ್ನು ಪರಿಚಯಿಸಲಾಗಿದೆ ಮತ್ತು ಯಶಸ್ವಿಯಾಗಿ ಜಾರಿಗೆ ತರಲಾಗಿದೆ.