Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ದತ್ತಪೀಠಕ್ಕೆ ಇಬ್ಬರು ‘ಹಿಂದೂ ಅರ್ಚಕ’ರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ
    ಇತ್ತೀಚಿನ ಸುದ್ದಿ

    BIGG NEWS : ದತ್ತಪೀಠಕ್ಕೆ ಇಬ್ಬರು ‘ಹಿಂದೂ ಅರ್ಚಕ’ರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

    December 4, 2022
    Share

    ಚಿಕ್ಕಮಗಳೂರು : ವಿವಾದಿತ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು, ಅಂತೆಯೇ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ.

    ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.ಇನ್ನೂ, ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನ ಪ್ರವೇಶ ನಿರ್ಬಂಧಿಸಲಾಗಿದೆ.

    ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ 5 ದಿನಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ದಿನಗಳಲ್ಲಿ ಪ್ರವಾಸಿಗರು ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದರೆ, ವಾಸ್ತವ್ಯ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

    Post Views: 212

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.