ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ.
ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಹಿಂದೂ ಸಂಘಟನೆಗಳು ಈ ರೀತಿಯ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಸಂಘಟನೆಗಳ ಬೇಡಿಕೆಗೆ ವ್ಯವಸ್ಥಾಪನಾ ಸಮಿತಿ ಸಮ್ಮತಿಸುವ ಸಾಧ್ಯತೆಯಿದೆ ಹಾಗಾಗಿ ಜಿಲ್ಲೆಯ ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮನವಿ ಮಾಡಲಾಗಿದೆ.
ಇನ್ನು ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಧರ್ಮ ಸಂಘರ್ಷ ಶುರುವಾಗಿದೆ. ಡಿಸೆಂಬರ್ 9.10. 11ರಂದು ನೆರವೇರಲಿರುವ ಜಾತ್ರೆಯಲ್ಲಿ ದೇವಸ್ಥಾನದ ಆವರಣದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶವಿಲ್ಲ.ಭಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆಯ ಒತ್ತಾಯದ ಮೇರೆಗೆ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.
ದೇವಸ್ಥಾನದ ಆಡಳಿತ ಮಂಡಳಿಯ ಆಡಳಿತಾಧಿಕಾರಿಯಿಂದ ಸಹಾಯಕ ಕಮಿಷನರ್ಗೆ ಈಗಾಗಲೇ ನಿರ್ಣಯವನ್ನು ರವಾನೆ ಮಾಡಲಾಗಿದೆ. ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ ಹೇರಲಾಗುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ