ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ.
ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ.ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ ಪರಿಸರದಲ್ಲಿ ಶಿವನ ಸಾನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ.ಸುಮಾರು 2 ರಿಂದ 3 ಅಡಿ ಉದ್ದದ ಶಿವಲಿಂಗದ ಪಾಣಿಪೀಠ ಇರುವ ಶಿವಲಿಂಗವಾಗಿದೆ.ಸುಮಾರು 400 ರಿಂದ 500 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದ್ದು ಶಿವಲಿಂಗ ಪ್ರತಿಷ್ಟೆಯಾಗಬೇಕು ಎಂದು ಕಂಡುಬಂದಿದೆ.