ಬೆಂಗಳೂರು: ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕೆಲಸಮಾಡಿವ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಮಹಾತ್ಮಾಗಾಂಧಇ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ಇರುತ್ತದೆ ಎಂದಿದ್ದಾರೆ.
ಇನ್ನೂ ಪ್ರಸ್ತುತ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವು ಶೇ.51ರಷ್ಟು ಇದ್ದು, ಇದನ್ನು ಶೇ.60ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಯೋಜನೆಯ ಕಾಮಗಾರಿಗಳನ್ನು ಹೆಚ್ಚಿನ ಸಂಖ್ಯೆಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡಲು ಈಗಾಗಲೇ ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.