Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿಯಲ್ಲಿ ಭರ್ಜರಿ ಜಿಎಸ್‌ಟಿ ಸಂಗ್ರಹ: ಗುರಿ ಮೀರಿದ ಸಾಧನೆ
    ಇತ್ತೀಚಿನ ಸುದ್ದಿ

    ಕರಾವಳಿಯಲ್ಲಿ ಭರ್ಜರಿ ಜಿಎಸ್‌ಟಿ ಸಂಗ್ರಹ: ಗುರಿ ಮೀರಿದ ಸಾಧನೆ

    December 20, 2022
    Share

    ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ ಭರ್ಜರಿಯಾಗಿ ಏರಿಕೆ ಕಾಣುತ್ತಿದ್ದು, ಕೋವಿಡ್‌ ಬಳಿಕ ನಿರಂತರವಾಗಿ ಉತ್ತಮ ಪ್ರಗತಿ ದಾಖಲಿಸಿದೆ.

    ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಮಂಗಳೂರು ಕೇಂದ್ರೀಯ ತೆರಿಗೆಗಳ ಆಯುಕ್ತಾಲಯದ ಮಾಹಿತಿಯ ಪ್ರಕಾರ 2021-22ನೇ ಸಾಲಿನಲ್ಲಿ ಗುರಿ ಮೀರಿದ ಸಾಧನೆಯಾಗಿದೆ.

    2022-23ರಲ್ಲೂ ಎಪ್ರಿಲ್‌-ನವೆಂಬರ್‌ ಅವಧಿಯಲ್ಲಿ ಭರ್ಜರಿ ತೆರಿಗೆ ಸಂಗ್ರಹಿಸಿದೆ. 2021-22ರಲ್ಲಿ 2,629 ಕೋಟಿ ರೂ. ಗುರಿಯಿದ್ದರೆ 2,897.21 ಕೋಟಿ ರೂ. ಸಂಗ್ರಹಿಸಲಾಗಿತ್ತು. 2022-23ನೇ ಸಾಲಿಗೆ 3,539 ಕೋಟಿ ರೂ. ಗುರಿ ಇದ್ದರೆ ನವೆಂಬರ್‌ ಅಂತ್ಯದ ವೇಳೆಗೆ 2,326.59 ಕೋಟಿ ರೂ. ಸಂಗ್ರಹವಾಗಿದೆ.

    ಎಪ್ರಿಲ್‌ನಿಂದ ನವೆಂಬರ್‌ವರೆಗೆ ಸಂಗ್ರಹವಾದ ಜಿಎಸ್‌ಟಿ ಯನ್ನೇ ವಿಶ್ಲೇಷಿಸಿದರೆ ಗುರಿಗಿಂತ ಹೆಚ್ಚು ಸಂಗ್ರಹವಾಗಿದೆ. ಎಪ್ರಿಲ್‌-ನವೆಂಬರ್‌ ವಿವರ ನೋಡಿದಾಗ, 2020-21ರಲ್ಲಿ 1,167.02 ಕೋಟಿ ರೂ. ಗುರಿಯಿದ್ದರೆ 1,200.35 ಕೋಟಿ ರೂ. ಸಂಗ್ರಹ ವಾಗಿತ್ತು. 2021-22ನೇ ಸಾಲಿನಲ್ಲಿ 1,596.25 ಕೋಟಿ ರೂ. ಗುರಿಯಿದ್ದು, 1,745.45 ಕೋಟಿ ರೂ. ಸಂಗ್ರಹವಾಗಿತ್ತು. ಈ ವರ್ಷವೂ ನವೆಂಬರ್‌ ವರೆಗಿನ ಗುರಿ 1,949.99 ಕೋಟಿ ರೂ. ಇದ್ದು, ಈಗಾಗಲೇ ಸಂಗ್ರಹ 2,326.59 ಕೋಟಿ ರೂ. ಆಗಿರುವುದು ಜಿಎಸ್‌ಟಿ ಅಧಿಕಾರಿಗಳ ಖುಷಿಗೆ ಕಾರಣವಾಗಿದೆ.

    ಜಿಎಸ್‌ಟಿ ಸಂಗ್ರಹದಲ್ಲಿ ಪೆಟ್ರೋಲಿಯಂ ಉತ್ಪನ್ನಗಳದ್ದೇ ಸಿಂಹ ಪಾಲು. 2021-22ರಲ್ಲಿ 696.69 ಕೋಟಿ ರೂ. ಇದ್ದ ಸಂಗ್ರ ಹವು 2022-23ನೇ ಸಾಲಿನ ಅಕ್ಟೋಬರ್‌ ವರೆಗಿನ ಲೆಕ್ಕಾಚಾರ ದಂತೆ 1,049.34 ಕೋಟಿ ರೂ.ನಷ್ಟು ಭರ್ಜರಿ ಏರಿಕೆ ಕಂಡಿದೆ.

    Post Views: 220

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.