ನವದೆಹಲಿ : ಅಮೆರಿಕ-ದೆಹಲಿ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಸಂಬಂಧ ಏರ್ ಇಂಡಿಯಾ ಕ್ರಮ ಕೈಗೊಂಡಿದೆ. ಆಂತರಿಕ ಸಮಿತಿಯ ನಿರ್ಧಾರದವರೆಗೆ ತಪ್ಪಿತಸ್ಥ ಪ್ರಯಾಣಿಕನಿಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ.
ತಪ್ಪಿತಸ್ಥರೆಂದು ಕಂಡುಬಂದರೆ, ನಿಯಂತ್ರಣ ಮಾರ್ಗಸೂಚಿಗಳ ಪ್ರಕಾರ ಅಶಿಸ್ತಿನ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ 70 ವರ್ಷದ ಮಹಿಳೆ ಮೇಲೆ ಕುಡಿದಿದ್ದ ಪ್ರಯಾಣಿಕನೋರ್ವ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಘಟನೆ ಸಂಬಂಧ ಮಹಿಳೆ ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದ ನಂತರ , ವ್ಯಕ್ತಿಯ ವಿರುದ್ಧ ವಿಮಾನಯಾನ ಸಂಸ್ಥೆ ಕ್ರಮ ಕೈಗೊಂಡಿದೆ. ಇತ್ತ ಪೊಲೀಸ್ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.