ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿ ಪತ್ತೆಗೆ ಮೈಸೂರು ಪೊಲೀಸರು ಮುಂದಾಗಿದ್ದು, . ಆತನ ಬಂಧನಕ್ಕೆ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ದೂರು ದಾಖಲಾದ ಬಳಿಕ ಸ್ಯಾಂಟ್ರೊ ರವಿ ನಾಪತ್ತೆಯಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸ್ಯಾಂಟ್ರೋ ರವಿ ವಿಚಾರ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ.
ಬೆಂಗಳೂರಿನಲ್ಲಿ ‘ಸ್ಯಾಂಟ್ರೋ ರವಿ’ 3 ಫ್ಲಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಮೈಸೂರಿನ ವಿಜಯನಗರ ಠಾಣೆ ಪೊಲೀಸರು ಬೆಂಗಳೂರಿನ ಶೇಷಾದ್ರಿಪುರಂ, ಬಸವನಗುಡಿ, ಟ್ರಿನಿಟಿ ಸರ್ಕಲ್ ನಲ್ಲಿರುವ ಫ್ಲಾಟ್ ಗಳ ಮೇಲೆ ದಾಳಿನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಂಜುನಾಥ್ ಆಲಿಯಾಸ್ ಸ್ಯಾಂಟ್ರೋ ರವಿ ಕಳೆದ ನಾಲ್ಕು ತಿಂಗಳ ಹಿಂದೆಯೇ ಫ್ಲಾಟ್ ಖಾಲಿ ಮಾಡಿದ್ದನು, ಫ್ಲ್ಯಾಟ್ ನಲ್ಲಿ ರವಿ ದಾಖಲೆಗಳು ಏನಾದರೂ ಸಿಗಬಹುದೆಂದು ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.