Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿಯಲ್ಲಿ ಫೆ.11, 12 ರಂದು ರಾಜ್ಯದ ಮೊದಲ `ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ’
    ಇತ್ತೀಚಿನ ಸುದ್ದಿ

    ಉಡುಪಿಯಲ್ಲಿ ಫೆ.11, 12 ರಂದು ರಾಜ್ಯದ ಮೊದಲ `ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ’

    January 11, 2023
    Share

    ಉಡುಪಿ: ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎ. ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಅಧ್ಯಕ್ಷ ವಿ.ಸುನಿಲ್ ಕುಮಾರ್ ಹೇಳಿದರು.

    ನಗರದ ಎಂ.ಜಿ.ಎ. ಕಾಲೇಜಿನ ಆವರಣ, ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಯಕ್ಷಗಾನಕ್ಕೆ ತನ್ನದೇ ಆದ ಹಿರಿಮೆ ಗರಿಮೆ ಇದ್ದು, ತುಳುನಾಡಿನಲ್ಲಿ ಇದಕ್ಕೆ ಇನ್ನೂ ಹೆಚ್ಚಿನ ಮಹತ್ವ ಇದೆ. ಯಕ್ಷಗಾನದಲ್ಲಿ ಪ್ರಸ್ತುತ ಇರುವ ಮತ್ತು ಮುಂದಿನ ದಿನದಲ್ಲಿ ಎದುರಾಗುವ ಹೊಸ ರೀತಿಯ ಸವಾಲುಗಳನ್ನು ಎದುರಿಸುವ ಬಗ್ಗೆ, ಹೊಸ ಪೀಳಿಗೆಗೆ ಯಕ್ಷಗಾನದ ಬಗ್ಗೆ ತಿಳಿಸಲು ಸೇರಿದಂತೆ ಯಕ್ಷಗಾನ ಬೆಳವಣಿಗೆ ಕುರಿತಂತೆ ಸಮ್ಮೇಳನದಲ್ಲಿ ಸಮಗ್ರ ಚರ್ಚೆ ನಡೆಯಲಿದೆ ಎಂದರು.

    ಯಕ್ಷಗಾನ ಕಲಾವಿದರು ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಬಳುವಳಿಯನ್ನು ನೀಡಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ಯಾವುದೇ ಒಂದು ಆಂಗ್ಲ ಭಾಷೆಯನ್ನು ಬಳಕೆ ಮಾಡದೇ ನಡೆಸುತ್ತಾ ಬಂದಿರುವುದು ಒಂದು ಮಹತ್ವವಾದ ಕೆಲಸ. ಇದು ಅವರ ಪ್ರಬುದ್ಧತೆ ಮತ್ತು ಹಿರಿಮೆಯನ್ನು ತೋರುತ್ತದೆ ಎಂದ ಅವರು, ಯಕ್ಷಗಾನ ಸಮ್ಮೇಳನವು ಎಲ್ಲಾ ಸಮ್ಮೇಳನಗಳಿಗೆ ಮಾದರಿಯಾಗುವ ರೀತಿಯಲ್ಲಿ ನಡೆಯಬೇಕು ಎಂದರು. 2 ದಿನಗಳ ಕಾಲ ನಡೆಯುವ ಈ ಸಮ್ಮೇಳನಕ್ಕಾಗಿ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಗಳನ್ನು ಬಿಡುಗಡೆಗೊಳಿಸುವುದಾಗಿ ಸಚಿವರು ಹೇಳಿದರು.

    ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದ ಸಚಿವರು, ಅಧ್ಯಕ್ಷರಾಗಿ ಡಾ.ಪ್ರಭಾಕರ ಜೋಷಿ ಅವರನ್ನು ಸಚಿವರು ಘೋಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ರಾಜ್ಯದಲ್ಲೇ ಪ್ರಥಮ ಬಾರಿಗೆ ನಡೆಯುತ್ತಿರುವ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನದ ಅಭೂತಪೂರ್ವ ಯಶಸ್ಸಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲೆಯ ಹಿರಿಯ ಯಕ್ಷಗಾನ ಕಲಾವಿದರು, ಯಕ್ಷಗಾನ ಆಸಕ್ತರು ಹಾಗೂ ಸಾರ್ವಜನಿಕರು ಮತ್ತು ಸಂಘ-ಸAಸ್ಥೆಗಳ ಸಹಕಾರ ಪಡೆಯಲಾಗುವುದು ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ, ಯಕ್ಷಗಾನ ಸಮ್ಮೇಳನದ ಕಾರ್ಯಾಧ್ಯಕ್ಷ ಡಾ. ಜಿ.ಎಲ್.ಹೆಗಡೆ, ಯಕ್ಷಗಾನವು ಕನ್ನಡ ಭಾಷೆಯ ಸಮೃದ್ಧ ಬೆಳವಣಿಗೆಗೆ ಅತೀ ಹೆಚ್ಚಿನ ಕೊಡುಗೆ ನೀಡಿದೆ. ಕನ್ನಡದ ಕಾವ್ಯಗಳನ್ನು ಕಟ್ಟಿ ನಿಲ್ಲಿಸಿದೆ. ಇದುವರೆಗೆ 52 ಮಂದಿ ಯಕ್ಷಗಾನದ ವಿವಿಧ ವಿಷಯಗಳಿಗೆ ಸಂಬ0ಧಿಸಿದ0ತೆ ಪಿ.ಹೆಚ್.ಡಿ ಪಡೆದಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ, ಸಾಲಿಗ್ರಾಮ ಮತ್ತು ಇತರೆ ಮೇಳಗಳ ಮುಖ್ಯಸ್ಥ ಪಿ.ಕಿಶನ್ ಹೆಗ್ಡೆ, ಮಂದಾರ್ತಿ ಯಕ್ಷಗಾನ ಮೇಳದ ಅಧ್ಯಕ್ಷ ಧನಂಜಯ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Post Views: 209

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.