Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಹೆಸರಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ
    ಇತ್ತೀಚಿನ ಸುದ್ದಿ

    ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಹೆಸರಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ

    January 18, 2023
    Share

    ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಂ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾಗ್ರಾಂ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ದೂರು ಹಂಚಿಕೊಂಡಿದ್ದಾರೆ.

    ಕಳೆದ ಎರಡು ದಿನಗಳಿಂದ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದು ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಎಲ್ಲಾ ಸ್ನೇಹಿತರಲ್ಲಿ ಕಷ್ಟದಲ್ಲಿರುವ ಕಾರಣ ಹೇಳಿ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ. ಇದು ಠಾಣಾಧಿಕಾರಿ ಗಮನಕ್ಕೆ ಬಂದು ಸಾಮಾಜಿಕ ಜಾಲತಾಣಗಳಲ್ಲಿ ಹಣ ನೀಡದಂತೆ ಸಂದೇಶ ಹಾಕಿದ್ದಾರೆ.ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಸೇರಿದಂತೆ ಗಣ್ಯರು, ಪತ್ರಕರ್ತರ ಫೇಸ್ ಬುಕ್ ಅಕೌಂಟ್ ಗಳನ್ನು ಹ್ಯಾಕ್ ಮಾಡಿ ಸ್ನೇಹಿತರನ್ನು ಮತ್ತೆ ತನ್ನ ಖಾತೆಗೆ ಸೇರಿಸಿಕೊಂಡು ಹಣವನ್ನು ಕೇಳುವ ಜಾಲ ದ.ಕ ಜಿಲ್ಲೆಯಾದ್ಯಂತ ಹಲವು ತಿಂಗಳಿನಿಂದ ನಡೆಯುತ್ತಿದೆ. ಈ ಕುರಿತು ಸೈಬರ್ ಸೆಲ್‍ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಹ್ಯಾಕರ್ ಗಳ ಪತ್ತೆ ಅಸಾಧ್ಯವಾಗುತ್ತಿದೆ. ಮೂಲವೊಂದರ ಪ್ರಕಾರ ಉತ್ತರಭಾರತ ಮೂಲದ ರೈತರುಗಳ ಬ್ಯಾಂಕ್ ಖಾತೆಗೆ , ಹ್ಯಾಕರ್ ಗಳು ಹಣವನ್ನು ಮೋಸದ ಮೂಲಕ ವರ್ಗಾಯಿಸುತ್ತಿದ್ದಾರೆ. ಅಲ್ಲಿ ರೈತರಿಗೆ ಸಣ್ಣ ಮೊತ್ತವನ್ನು ನೀಡಿ ಅವರಿಂದ ಬ್ಯಾಂಕ್ ಖಾತೆ ಸಂಖ್ಯೆ, ಒಟಿಪಿ ಪಡೆದುಕೊಂಡು ಹಣವನ್ನು ವರ್ಗಾಯಿಸುತ್ತಿದ್ದಾರೆ. ಜಿಲ್ಲೆಯ ಸೈಬರ್ ಸೆಲ್ ಪೊಲೀಸರು ಅಕೌಂಟ್ ಫ್ರೀಝ್ ಮಾಡಿ ಉತ್ತರಭಾರತಕ್ಕೆ ತಲುಪುವ ಹೊತ್ತಲ್ಲಿ ಬಡರೈತ ಮಾತ್ರ ಪೊಲೀಸರಿಗೆ ಎದುರಾಗುತ್ತಿದ್ದಾನೆ. ಆದರೆ ಆರೋಪಿಗಳ ಸುಳಿವು ಲಭ್ಯವಾಗುತ್ತಿಲ್ಲ.


    ಸೆಂಟ್ರಲೈಸ್ ಆಗಬೇಕಿದೆ ಸೈಬರ್ ಠಾಣೆ : 

    ಅಂತರ್ಜಾಲದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ವಂಚನೆಗಳು ನಡೆಯುತ್ತಲೇ ಇದೆ. ಇಡೀ ದೇಶದುದ್ದಕ್ಕೂ ವಂಚನೆಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ರಾಜ್ಯ ಪೊಲೀಸ್ ಇಲಾಖೆಯಡಿ ಸೈಬರ್ ಠಾಣೆಗಳಿರುವುದರಿಂದ ತನಿಖೆ ವೇಗವನ್ನು ಪಡೆಯದೆ ಹಲವು ಕೋನಗಳಲ್ಲಿ ಅಡಚಣೆಗಳು ಉಂಟಾಗಿ ಆರೋಪಿಗಳ ಪತ್ತೆ ಅಸಾಧ್ಯವಾಗುತ್ತಿದೆ . ಇದರಿಂದ ಕೇಂದ್ರದಿಂದಲೇ ಸೈಬರ್ ಠಾಣೆ ನಿರ್ವಹಿಸುವ ಯೋಜನೆ ಜಾರಿಯಾದಲ್ಲಿ ಜಿಲ್ಲೆಯಲ್ಲಿ ಆಗುವ ಅಪರಾಧದ ಕುರಿತು ದೇಶದುದ್ದಕ್ಕೂ ಏಕಸಮಯದಲ್ಲಿ ತನಿಖೆಯನ್ನು ಆರಂಭಿಸಿ ತಕ್ಷಣಕ್ಕೆ ಆರೋಪಿ ಪತ್ತೆ ಸಾಧ್ಯವಾಗಬಹುದು ಅನ್ನುವ ಅಭಿಪ್ರಾಯ ಪೊಲೀಸರದ್ದಾಗಿದೆ.

    Post Views: 214

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.