Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ – 1.5 ಕೋಟಿ ದಂಡ, 5 ವರ್ಷ ಜೈಲು ಶಿಕ್ಷೆ!
    ಇತ್ತೀಚಿನ ಸುದ್ದಿ

    ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ – 1.5 ಕೋಟಿ ದಂಡ, 5 ವರ್ಷ ಜೈಲು ಶಿಕ್ಷೆ!

    January 28, 2023
    Share

    ಮಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ ಭ್ರಷ್ಟಾಚಾರದಡಿ 1.5 ಕೋಟಿ ದಂಡ ಮತ್ತು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ.

    ಬೆಳ್ತಂಗಡಿ ಸೈಹಾದ್ರಿ ವಲಯದ ವಲಯ ಅರಣ್ಯಾಧಿಕಾರಿ ಆರೋಪಿ ಎಸ್.ರಾಘವ ಪಾಟಾಳಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಆರೋಪಿಯಾಗಿದ್ದಾರೆ. ಪಾಟಾಳಿ ಮೇಲೆ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ದೂರಿನ ಮೇರೆಗೆ ಮಂಗಳೂರು ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ D:21-07-2011 do da od 11/2011 o 13(1x) tad 13(2) ಭ್ರಷ್ಟಾಚಾರ ತಡೆ ಕಾಯ್ದೆ 1988, ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಮಾನ್ಯ ಬಿ.ಬಿ. ಜಕಾತಿ ಅವರು ಅಂತಿಮ ತೀರ್ಪು ನೀಡಿದ್ದು. ತೀರ್ಪಿನಲ್ಲಿ ಎಸ್.ರಾಘವ ಪಾಟಾಳಿ, ವಲಯ ಅರಣ್ಯಾಧಿಕಾರಿ, ಸಹ್ಯಾದ್ರಿ ವಲಯ, ಇವರ ವಿರುದ್ಧ ಕಲಂ 13(1)(ಇ) ಜೊತೆಗೆ 13(2) .ಭ್ರಷ್ಟಾಚಾರ ತಡೆ ಕಾಯ್ದೆ 1988, ರಂತೆ 05 ವರ್ಷಗಳ ಸಾದಾ ಸಜೆ ಹಾಗೂ ರೂ 1,50,00,000/- (1 ಕೋಟಿ ಐವತ್ತು ಲಕ್ಷ ರೂಪಾಯಿ) ದಂಡ ವಿಧಿಸಿದ್ದು ಆರೋಪಿಯು ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 1 ವರ್ಷಗಳ ಕಾಲ ಸಾದಾ ಸಜೆ ಶಿಕ್ಷೆಯನ್ನು ಆದೇಶಿಸಿ ತೀರ್ಪು ನೀಡಿದ್ದಾರೆ. 2011 ರಲ್ಲಿ ಈ ಪ್ರಕರಣ ನಡೆದಿದ್ದು ಅಂದಿನ ಲೋಕಯುಕ್ತ ಇನ್ಸ್‌ಪೆಕ್ಟರ್ ಉದಯ್ .ಎಂ. ನಾಯಕ್‌ ಬೆಳ್ತಂಗಡಿಯ ಕಚೇರಿ ಮತ್ತು ಮಂಗಳೂರು ಕೊಂಚಾಡಿಯ ಮನೆಗೆ ದಾಳಿ ಮಾಡಿ ಪಾಟಾಳಿ ವಿರುದ್ದ ಪ್ರಕರಣ ದಾಖಲು ಮಾಡಿದ್ದರು. ಲೋಕಯುಕ್ತ ಡಿವೈಎಸ್‌ ಪಿ ವಿಠಲ ದಾಸ ಪೈ ಪ್ರಕರಣದ ತನಿಖೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ರವೀಂದ್ರ ಮಣಿಪಾಡಿ ಅವರು ಲೋಕಾಯುಕ್ತದ ವಿಶೇಷ ಅಭಿಯೋಜಕಾರಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. .

    Post Views: 183

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.