ಬ್ರಹ್ಮಾವರ: ಮದುವೆಗೆಂದು ಲಾಕರ್ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಹೂಡೆಯ ಅಫ್ರೀನ್ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು.
ಇನ್ನು ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್ ತೆರೆದು ನೋಡುವಾಗ ಚಿನ್ನಾಭರಣ ಕಾಣೆಯಾಗಿತ್ತು.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.