ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ವೇಳಾಪಟ್ಟಿಯ ಅನುಸಾರ ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಾರ್ಚ್ 01, 2023 ರಂದು ಕೊನೆಗೊಳ್ಳಲಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ:
ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ
23-02-2023 -ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.
24-02-2023 – ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ.
25-02-2023 – ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ.
26-02-2023 – ಭಾನುವಾರ ರಜೆ.
27-02-2023 – ಗಣಿತ .28-02-2023 – ವಿಜ್ಞಾನ.
01-02-2023 – ಸಮಾಜ