Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಸ್ವಚ್ಛತೆಗೆ ಮಾದರಿಯಾದ ಉಡುಪಿ ಜಿಲ್ಲಾಧಿಕಾರಿ ವಸತಿಗೃಹ-ವಿನೂತನ ಕಾಂಪೋಸ್ಟ್ ಬೆಡ್ ನಿರ್ಮಾಣ
    ಕರಾವಳಿ ಸುದ್ದಿ

    ಸ್ವಚ್ಛತೆಗೆ ಮಾದರಿಯಾದ ಉಡುಪಿ ಜಿಲ್ಲಾಧಿಕಾರಿ ವಸತಿಗೃಹ-ವಿನೂತನ ಕಾಂಪೋಸ್ಟ್ ಬೆಡ್ ನಿರ್ಮಾಣ

    February 5, 2023
    Share

    ಉಡುಪಿ : ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯು ಪ್ರಸ್ತುತ ಮತ್ತೊಂದು ವಿನೂತನ ಸ್ವಚ್ಛತಾ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆಗೆ ಜಿಲ್ಲಾಧಿಕಾರಿಗಳ ವಸತಿಗೃಹ ಸಾಕ್ಷಿಯಾಗಿದೆ.

    ಮನೆಯ ಕಾಂಪೌ0ಡ್ ನಲ್ಲಿ ಬೀಳುವ ಒಣಕಸವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡುವ ವಿಧಾನವನ್ನು ಉಡುಪಿ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿದ್ದು, ವಸತಿಗೃಹದಲ್ಲಿನ ಕೈ ತೋಟದ ಒಣ ಹುಲ್ಲು, ತೋಟದ ಗಿಡಗಳಿಂದ ಬಿದ್ದಿದ್ದ ಗಿಡದ ಎಲೆಗಳು, ಮರದ ಮೇಲಿಂದ ಬಿದ್ದ ಒಣ ಎಲೆಗಳನ್ನು ಒಟ್ಟುಗೂಡಿಸಿ, “ಡ್ರೈ ಲೀವ್ಸ್ ಕಂಪೋಸ್ಟ್ ಬೆಡ್” ನಿರ್ಮಾಣ ಮಾಡಲಾಗಿದೆ.

    ಕಾಂಪೌ0ಡ್ ನಲ್ಲಿ ಸಂಗ್ರಹಿಸಲಾದ ಎಲೆ ಮತ್ತು ಹುಲ್ಲನ್ನು ಸೆಗಣಿಯೊಂದಿಗೆ ಮಿಶ್ರಣ ಮಾಡಿ, 10*6 ಅಳತೆಯ ಬೆಡ್ ಮಾದರಿಯಲ್ಲಿ ಜೋಡಿಸಲಾಗಿದ್ದು,ಗೋಣಿಚೀಲದ ಹೊದಿಕೆ ಹಾಕಲಾಗಿದೆ.ಪ್ರತಿ ದಿನ ದಿನ ಈ ಬೆಡ್ ಮೇಲೆ ನೀರಿನ ಸಿಂಪಡಣೆ ಮಾಡಬೇಕಿದ್ದು, ಇದು 45 ದಿನಗಳ ಬಳಿಕ ಅತ್ಯುತ್ತಮ ಸಾವಯವ ಗೊಬ್ಬರವಾಗಿ ಪರಿವರ್ತನೆಗೊಳ್ಳಲಿದೆ. ಇದನ್ನು ಕೈ ತೋಟದಲ್ಲಿನ ಗಿಡಗಳಿಗೆ ಬಳಸಬಹುದು ಅಥವಾ ಅದೇ ಗೊಬ್ಬರದ ಬೆಡ್ ನಲ್ಲಿ ಬೀಜಗಳನ್ನು ನಡೆಸು ಮೂಲಕ ಗಿಡಗಳನ್ನು ಬೆಳಸಲು ಸಾದ್ಯವಾಗಲಿದೆ. ಎಲ್ಲದಕ್ಕೂ ಮುಖ್ಯವಾಗಿ ಮನೆಯ ಆವರಣವು ಕಸದಿಂದ ಮುಕ್ತವಾಗಿ ಸ್ವಚ್ಛತೆಯಿಂದ ಕಂಗೊಳಿಸಲಿದೆ.

    ಈಗಾಗಲೇ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಹಸಿ ಕಸ ನಿರ್ವಹಣೆಗೆ ಡ್ರಮ್ ಕಾಂಪೋಸ್ಟ್ ವಿಧಾನವನ್ನು ಅಳವಡಿಸಿಕೊಂಡಿದ್ದು, ಪ್ರಸ್ತುತ ಒಣ ಕಸ ನಿರ್ವಹಣೆ ಸಹ ಯಶಸ್ವಿಯಾಗಿ ಅನುಷ್ಠಾನಗೊಳ್ಳುವ ಮೂಲಕ ಮಾದರಿ ವಸತಿಗೃಹವಾಗಿ ಪರಿವರ್ತನೆಯಾಗಿದೆ.

    ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಅವರ ನಿರ್ದೇಶನದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯವರ ನಿವಾಸದ ಕೈ ತೋಟದಲ್ಲಿ SLRM ಸ್ವಚ್ಛತಾ ಕಾರ್ಯಕರ್ತರು ಈ ವಿನೂತನ ಕಂಪೋಸ್ಟ್ ಬೆಡ್ ನಿರ್ಮಾಣ ಮಾಡಿದ್ದಾರೆ. ಈ ಮಾದರಿ ಬಗ್ಗೆ SLRM ನ ಸ್ವಚ್ಛತಾ ಕಾರ್ಯಕರ್ತರು ವೆಲ್ಲೊರ್ ಶ್ರೀನಿವಾಸನ್ ಇವರಿಂದ ತರಬೇತಿ ಪಡೆದಿರುತ್ತಾರೆ. ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರಾದ ರಘುನಾಥ್ ಇವರು ಮಾರ್ಗದರ್ಶನ ನೀಡಿದ್ದಾರೆ.

    ಮನೆಯ ಆವರಣದಲ್ಲಿ ಬೀಳುತಿದ್ದ ಒಣಕಸವನ್ನು ಸಂಪನ್ಮೂಲವಾಗಿ ಬಳಕೆ ಮಾಡಬಹುದು ಎಂಬುದಕ್ಕೆ ಡ್ರೈ ಲೀವ್ಸ್ ಕಂಪೋಸ್ಟ್ ಬೆಡ್ ಮಾದರಿಯಾಗಿದೆ. ಸಾರ್ವಜನಿಕರೂ ಸಹ ತಮ್ಮ ಮನೆಗಳ ಕೌಂಪೌ0ಡ್ ನಲ್ಲಿ ಬೀಳುವ ಒಣ ಕಸವನ್ನು ಸುಡುವುದು ಅಥವಾ ಬಿಸಾಡುವುದು ಮಾಡದೇ ಈ ರೀತಿಯಾಗಿ ವ್ಯವಸ್ಥಿತವಾಗಿ ಮರು ಬಳಕೆ ಮಾಡಿಕೊಳ್ಳಬಹುದಾಗಿದೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

    Post Views: 175

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.