Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಸ್ಪತ್ರೆಗೆ ದಾಖಲಾಗಿದ್ದ 137 ವಿದ್ಯಾರ್ಥಿನಿಯರು ಡಿಸ್ಚಾರ್ಜ್
    ಇತ್ತೀಚಿನ ಸುದ್ದಿ

    ಆಸ್ಪತ್ರೆಗೆ ದಾಖಲಾಗಿದ್ದ 137 ವಿದ್ಯಾರ್ಥಿನಿಯರು ಡಿಸ್ಚಾರ್ಜ್

    February 8, 2023
    Share

    ಮಂಗಳೂರು: ನಗರದ ಸಿಟಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಫುಡ್ ಪಾಯಿಸನ್ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ದ.ಕ ಆರೋಗ್ಯ ಇಲಾಖೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್​​ಐಆರ್ ದಾಖಲಿಸಿದೆ.

    ಆಸ್ಪತ್ರೆಗೆ ದಾಖಲಾಗಿದ್ದ 137 ಮಂದಿ ವಿದ್ಯಾರ್ಥಿನಿಯರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯ ಕಡೆಗೆ ಹೆಜ್ಜೆ ಹಾಕಿದ್ದಾರೆ. ಮಂಗಳೂರು ನಗರದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್‌ನ 137 ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಅವರು ನೀಡಿರುವ ದೂರಿನಂತೆ ಈ ಪ್ರಕರಣ ದಾಖಲು ಮಾಡಲಾಗಿದೆ. ಯಾವುದೋ ಸಂಶಯಾಸ್ಪದ ವಿಷಹಾರಿ ಆಹಾರವನ್ನು ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ನೀಡಲಾಗಿದೆ ಮತ್ತು ಆಹಾರ ತಯಾರಿಕೆ ಹಾಗೂ ಪೂರೈಕೆಯಲ್ಲಿ ಶುಚಿತ್ವ ಕಾಪಾಡದೆ ನಿರ್ಲಕ್ಷ್ಯ ವಹಿಸಲಾಗಿದೆ.

    ಜಿಲ್ಲಾಡಳಿತಕ್ಕೆ ಮಾಹಿತಿ ನೀಡದ ಕಾಲೇಜು ಆಡಳಿತ ಮಂಡಳಿ

    ಆಸ್ವತ್ರೆಗೆ ದಾಖಲಿಸುವ ಸಂದರ್ಭ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡದೇ ಲೋಪ ಎಸಗಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

    ಆಹಾರ ಸುರಕ್ಷಿತಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಪ್ರಾಂಶುಪಾಲರು, ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿಗಳು ಜಂಟಿಯಾಗಿ ಹಾಸ್ಟೆಲ್ ನ ಆಹಾರ ತಯಾರಿಕಾ ಕೊಠಡಿಗೆ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲನೆ ನಡೆಸಿದೆ.

    ಆಹಾರದ ಮಾದರಿ ಸಂಗ್ರಹ

    ತಯಾರಿಸಿರುವ ಆಹಾರ ಪದಾರ್ಥಗಳು, ಕುಡಿಯುವ ನೀರು ಫ್ರಿಡ್ಜ್ ನಲ್ಲಿದ್ದ ಮಾಂಸ ಇನ್ನಿತರೆ ಆಹಾರ ವಸ್ತುಗಳನ್ನು ತಂಡ ಸಂಗ್ರಹಿಸಿ ಲ್ಯಾಬ್​​ಗೆ ಕಳುಹಿಸುವ ವ್ಯವಸ್ಥೆ ಮಾಡಿದೆ. ಅಲ್ಲದೆ ತಕ್ಷಣದಿಂದ ಅಡುಗೆ ಮನೆಯಲ್ಲಿ ಯಾವುದೇ ಆಹಾರ ಪದಾರ್ಥಗಳನ್ನು ತಯಾರಿಸದಂತೆ ನಿರ್ಬಂಧ ವಿಧಿಸಿದೆ.

    ಪೋಷಕರ ಆಕ್ರೋಶ

    ಅಲ್ಲದೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಯ ಸಭೆ ನಡೆದಿದೆ. ಈ ವೇಳೆ ಪೋಷಕರು ಹಾಸ್ಟೆಲ್ ನ ಅವ್ಯವಸ್ಥೆ, ಸರಿಯಾದ ಆಹಾರ ನೀಡದ ಬಗ್ಗೆ ಆಕ್ರೋಶಿತರಾಗಿದ್ದಾರೆ.

    ವಿದ್ಯಾರ್ಥಿಗಳಿಗೆ ರಜೆ

    ಕೆಲವರು ತಮ್ಮ ಮಕ್ಕಳು ಯಾವ ಆಸ್ಪತ್ರೆಯಲ್ಲಿ ಇದ್ದಾರೆಂದು ಇನ್ನೂ ತಿಳಿದು ಬಂದಿಲ್ಲ ಎಂಬ ಗೊಂದಲದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಬಳಿಕ ಎಸಿಪಿಯವರ ಸಮಕ್ಷಮದಲ್ಲಿ ಪೋಷಕರಿಗೆ ಸಮಾಧಾನ ತಿಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

    ಎಲ್ಲರ ಆರೋಗ್ಯ ಸ್ಥಿರ

    ಸದ್ಯ ಆಸ್ಪತ್ರೆಗೆ ದಾಖಲಾಗಿದ್ದ 137 ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಎಲ್ಲರನ್ನೂ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಮುಂದೆ ಕಾಲೇಜು ಆರಂಭ ಮಾಡುವ ಮುನ್ನ ಪೋಷಕರ ಸಭೆ ನಡೆಸಿ ಎಲ್ಲಾ ಸರಿಯಾದ ಬಳಿಕವೇ ಕಾಲೇಜು, ಹಾಸ್ಟೆಲ್ ಆರಂಭವಾಗಲಿದೆ ಎಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

    Post Views: 153

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.