ಬೆಂಗಳೂರು : ಫೆ. 10 ರಿಂದ 24 ರವರೆಗೆ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.
ಮೆರವಣಿಗೆ, ಪ್ರತಿಭಟನೆಗೆ, ಸಭೆ ಆಯೋಜನೆಗೆ ನಿಷೇಧ ಹೇರಲಾಗಿದೆ. ಈ ವೇಳೆ ಯಾವುದೇ ಪ್ರತಿಕೃತಿಗಳ ದರ್ಶನ ಹಾಗೂ ದಹನ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಫೆ.10 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆ.17 ಕ್ಕೆ ಬಜೆಟ್ ಮಂಡನೆಯಾಗಲಿದೆ.
ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕ ನೆಮ್ಮದಿಗೆ ಭಂಗ, ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿಯವರು ಐಪಿಸಿ ಸೆಕ್ಷನ್ 144 ರ ಪ್ರಕಾರ ಪ್ರತಿಬಂಧಕಾಜ್ಞೆ ಜಾರಿಮಾಡಿ ಆದೇಶಿಸಿದ್ದಾರೆ.