ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ ಇಂದು 14 ಐಎಎಸ್ ಹಾಗೂ ಓರ್ವ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಸರ್ಕಾರವು, ಕಾಮರ್ಸ್ ಮತ್ತು ಇಂಡಸ್ಟ್ರೀಯಲ್ ಡಿಪಾರ್ಮೆಂಟ್ ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದತಂತ ಡಾ.ರಮಣ ರೆಟ್ಟಿ ಇ.ವಿ ಅವರನ್ನು ಗೌರ್ನಮೆಂಟ್ ಕಮ್ ಡೆವಲಪ್ ಮೆಂಟ್ ಕಮೀಷನರ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ.
ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಕಪೀಲ್ ಮೋಹನ್ ಅವರಿಗೆ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ, ಹೆಚ್ಚುವರಿ ಹೊಣೆಗಾರಿಕೆ ವಹಿಸಿದೆ. ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಕುಮಾರ್ ನಾಯಕ್ ಜಿ ಅವರನ್ನು ಬಿಡಿಎ ಕಮೀಷನರ್ ಆಗಿ ನೇಮಕ ಮಾಡಿದೆ.
ಉಮಾಶಂಕರ್ ಎಸ್ ಆರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ, ರಶ್ಮಿ ವಿ ಮಹೇಶ್ ಅವರನ್ನು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಡಾ.ಸೆಲ್ವಕುಮಾರ್ ಎಸ್ ಅವರನ್ನು ಪಬ್ಲಿಕ್ ವರ್ಕ್ ಡಿಪಾರ್ಮೆಂಟ್ ಮುಖ್ಯ ಕಾರ್ಯದರ್ಶಿಯ ಜೊತೆಗೆ, ಹೆಚ್ಚುವರಿಯಾಗಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಉದ್ಯಮಶೀಲತೆ ಜೀವನೋಪಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಮನೋಜ್ ಜೈನ್ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯನ್ನಾಗಿ, ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದಂತ ಡಾ.ಶಿವ ಶಂಕರ್ ಎನ್ ಅವರನ್ನು ವರ್ಗಾವಣೆ ಮಾಡಿ, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತಕ್ಕೆ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕ ಮಾಡಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದಂತ ನಳಿನಿ ಅತುಲ್ ಅವರನ್ನು ನಿರ್ದೇಶಕರು, ಸಾಮಾಜಿಕ ಲೆಕ್ಕಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ನಿಯೋಜಿಸಿದೆ. ಹಾವೇರಿ ಜಿಲ್ಲಾ ಪಂಚಾಯ್ತಿ ಸಿಇಒ ಮೊಹಮ್ಮದ್ ರೋಷನ್ ಅವರನ್ನು ಹೆಸ್ಕಾಂ ಎಂಡಿಯಾಗಿ, ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ನೇಮಿಸಿದೆ.