ಕಾಪು: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ.

ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ಸ್ಕೂಟರ್ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.