Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್
    ಇತ್ತೀಚಿನ ಸುದ್ದಿ

    ಇಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್

    February 17, 2023
    Share

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಫೆ.17) ರಾಜ್ಯ ಸರ್ಕಾರದ ಕೊನೆಯ ಬಜೆಟ್‌ ಅನ್ನು ಮಂಡಿಸಲಿದ್ದಾರೆ. ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಅವರು ತಮ್ಮ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

    ಇಂದು ಬೆಳಗ್ಗೆ 10.15ಕ್ಕೆ ವಿಧಾನಮಂಡಲದಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್‌ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ.

    ಈ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಕೊನೆಯ ಬಜೆಟ್ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ.

    ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಅಥವಾ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಅನುದಾನ, ಇಲ್ಲವೇ ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡುವ ಬಗ್ಗೆ ಕೂಡ ತಿಳಿಸುವ ಸಾಧ್ಯತೆ ಇದೆ. ಗಾಣಿಗ, ಮಡಿವಾಳ, ಮೇದಾರ, ನೇಕಾರ, ಕುಂಬಾರ, ಅಕ್ಕಸಾಲಿಗ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಮಂಡಳಿ. ಗೃಹಿಣಿಯರಿಗೆ 1,500 ರೂ ಸಹಾಯಧನ ನೀಡುವ ಬಗ್ಗೆ ತಿಳಿಸುತ್ತಾರೆ ಎನ್ನಲಾಗಿದೆ. ಇದಲ್ಲದೇ ಅಂಗನವಾಡಿ ಆಶಾ ಕಾರ್ಯಕರ್ತೆಯರ ಬಹು ದಿನಗಳ ಕನಸಾದ ಸಂಬಳ ಏರಿಕೆ ಬಗ್ಗೆ ಕೂಡ ಕೂತುಹಲ ಮನೆ ಮಾಡಿದೆ.

    ಸರ್ಕಾರಿ ನೌಕರರ ಪರ ಕೂಡ ರಾಜ್ಯ ಸರ್ಕಾರ ಬ್ಯಾಟ್‌ ಬೀಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವರದಿ ಅನುಷ್ಠಾನ ಘೋಷಣೆಯಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ.

    Post Views: 195

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.