Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ `ಎಸ್.ಕೆ. ಭಗವಾನ್’ ಇನ್ನಿಲ್ಲ
    ಇತ್ತೀಚಿನ ಸುದ್ದಿ

    BREAKING NEWS : ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ `ಎಸ್.ಕೆ. ಭಗವಾನ್’ ಇನ್ನಿಲ್ಲ

    February 20, 2023
    Share

    ಬೆಂಗಳೂರು : ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ (90) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ.

    ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು. ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

    1966ರಲ್ಲಿ ಎಂ.ಸಿ. ನರಸಿಂಹಮೂರ್ತಿಯವರೊಡಗೂಡಿ ಸಂಧ್ಯಾರಾಗ ಸಿನೆಮಾ ನಿರ್ದೇಶಿಸಿದರು. ನಂತರ ದೊರೈ-ಭಗವಾನ್ ಜೋಡಿಯು ರಾಜಕುಮಾರ್ ನಾಯಕನಟನಾಗಿರುವ ‘ಜೇಡರ ಬಲೆ’ ಚಿತ್ರವನ್ನು ನಿರ್ದೆಶಿಸಿತು. ಇದು ಕನ್ನಡದಲ್ಲಿ ಜೇಮ್ಸ್ ಬಾಂಡ್‌ ಮಾದರಿಯ ಮೊದಲ ಚಿತ್ರವಾಗಿತ್ತು. ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಈ ನಿರ್ದೇಶಕದ್ವಯರು ಜೋಡಿಯಾಗೇ ನಿರ್ದೇಶಿಸಿದರು. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿದರು. ಇವರ ೩೦ ಚಿತ್ರಗಳಲ್ಲಿ ಡಾ.ರಾಜಕುಮಾರ್ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಕೆಲವು ಚಿತ್ರಗಳಲ್ಲಿ ಅನಂತನಾಗ್ ಮತ್ತು ಲಕ್ಷ್ಮಿ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಎಸ್.ಕೆ ಭಗವಾನ್ ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವ ಹೊಂದಿದ್ದಾರೆ.

    Post Views: 212

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.