Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಬ್ಬರ ಬಲಿ ಪಡೆದ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭ…!!
    ಇತ್ತೀಚಿನ ಸುದ್ದಿ

    ಇಬ್ಬರ ಬಲಿ ಪಡೆದ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭ…!!

    February 21, 2023
    Share

    ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿ ಕಾಡಾನೆ ಹಾವಳಿ ನಿಯಂತ್ರಿಸುವ ಹಿನ್ನಲೆ ಕಾಡಾನೆ ಸೆರೆಗೆ ಕಾರ್ಯಾಚರಣೆಗೆ ಸಿದ್ಧತೆಗಾಗಿ ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ 5 ಆನೆಗಳು ಕಡಬ ತಾಲೂಕಿನ ರೆಂಜಿಲಾಡಿಗೆ ಆಗಮಿಸಿದೆ.

    ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ.

    ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಬಂದಿದೆ.

    ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸಿ, ಡ್ರೋನ್ ಬಳಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚಲಾಗುತ್ತಿದೆ.ಕಾಡಾನೆಯನ್ನು ಸೆರೆ ಹಿಡಿಯಲು ಸಾಕಾನೆಗಳ ಸಹಕಾರ ಪಡೆಯಲಾಗುತ್ತದೆ. ಒಂದು ಕಾಡಾನೆ ಇರುವ ಜಾಗವನ್ನು ಪತ್ತೆ ಹಚ್ಚುವ ಕೆಲಸ ನಡೆಸುತ್ತಿದೆ‌.

    ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ಆರಂಭಿಸಿದ್ದಾರೆ.

    ನಾಗರಹೊಳೆ ಹಾಗೂ ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಆಗಮಿಸಿದೆ.

    ಕಾಡಾನೆ ಹಾವಳಿ ತಡೆಯಲು ಕ್ರಮ ಕೈಗೊಳ್ಳಬೇಕು. ಜನರನ್ನು ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದರು.

    ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ರವಿಕುಮಾರ್.‌ಎಂ.ಆರ್, ಡಿಎಫ್‌ಒ ದಿನೇಶ್ ಕುಮಾರ್ ಅವರು ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರಿಸುವ ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತರಾದ ಇಲಾಖೆ ಕಾಡಾನೆ ಸೆರೆಗೆ‌ ಕಾರ್ಯಾಚರಣೆ ಆರಂಭಿಸಲಾಗಿದೆ.

    Post Views: 182

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.