ರಾಯಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ದಾರೆ. ರಾಯ್ ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಅವರು ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ರಾಜಕೀಯ ಇನ್ನಿಂಗ್ಸ್ ಅಂತ್ಯಗೊಂಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂಬ ಅಭಿಪ್ರಾಯ ಈ ಮೂಲಕ ವ್ಯಕ್ತವಾಗಿದೆ.ಈ ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ತೃಪ್ತಿ ತಂದಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.