Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ; ಇಬ್ಬರು ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ; ಇಬ್ಬರು ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ

    March 2, 2023
    Share

    ಮಂಗಳೂರು: ಮಕ್ಕಳಿಬ್ಬರಿಗೆ ಕುಣಿಕೆ ಬಿಗಿದು ತಾಯಿಯೊಬ್ಬಳು ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಕೊಡಿಯಾಲ ಗುತ್ತುವಿನಲ್ಲಿ ಬುಧವಾರ ನಡೆದಿದೆ.

    ಘಟನೆಯಲ್ಲಿ ತಾಯಿ ಹಾಗೂ ನಾಲ್ಕು ವರ್ಷದ ಪುತ್ರಿ ಸಾವಿಗೀಡಾಗಿದ್ದಾರೆ. 12ರ ಪುತ್ರಿ ಸಾವಿನ ದವಡೆಯಿಂದ ಪಾರಾಗಿದ್ದಾಳೆ. ನಗರದ ಕೊಡಿಯಾಲ ಗುತ್ತು ನಿವಾಸಿ ವಿಜಯಾ(33), ಶೋಭಿತಾ(4) ಸಾವನ್ನಪ್ಪಿದವರು. ಯಜ್ಞಾ(12) ಎಂಬಾಕೆ ಸಾವಿನ ದವಡೆಯಿಂದ ಪಾರಾಗಿದ್ದಾಳೆ. ವಿಜಯಾ ಅವರಿಗೆ ಎರಡು ವಿವಾಹವಾಗಿತ್ತು. ಆದರೆ ಮೊದಲ ಪತಿ ಮೃತಪಟ್ಟಿದ್ದರು. ಆ ಬಳಿಕ ಆರೇಳು ವರ್ಷದ ಹಿಂದೆ ವಿಜಯ ಅವರಿಗೆ ಎರಡನೇ ವಿವಾಹವಾಗಿತ್ತು. ಆದರೆ ಕೆಲ ತಿಂಗಳ ಹಿಂದೆ ಎರಡನೇ ಪತಿಯೂ ಮೃತಪಟ್ಟಿದ್ದಾರೆ. ನೇಣಿನಿಂದ ಪಾರಾದ ಯಜ್ಞಾ ಎಂಬ ಬಾಲಕಿ ಅವರ ಮೊದಲ ಪತಿಯ ಪುತ್ರಿ. ಇಂದು ಸಂಜೆ ವೇಳೆಗೆ ವಿಜಯಾ ತನ್ನಿಬ್ಬರು ಮಕ್ಕಳನ್ನು ನೇಣಿಗೆ ಹಾಕಿ ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಯಜ್ಞಾ ಎಂಬ ಪುತ್ರಿಯ ಕಾಲಡಿಗೆ ಟೇಬಲ್ ಸ್ಪರ್ಶವಾಗಿದೆ. ಪರಿಣಾಮ ಆಕೆ ಸಾವಿನ ದವಡೆಯಿಂದ ಪಾರಾಗಿದ್ದಾಳೆ. ಇದರಿಂದ ಆಕೆ ತನ್ನ ನೇಣು ಕುಣಿಕೆಯಿಂದ ಬಿಡಿಸಿಕೊಂಡ ಮನೆಯಿಂದ ಹೊರಬಂದು ಸ್ಥಳೀಯರಿಗೆ ವಿಚಾರ ತಿಳಿಸಿದ್ದಾಳೆ. ತಕ್ಷಣ ಸ್ಥಳೀಯರು ಸ್ಥಳಕ್ಕೆ ದೌಢಾಯಿಸಿ ನೋಡಿದಾಗ ವಿಜಯಾ ಹಾಗೂ ಶೋಭಿತಾ ಮೃತಪಟ್ಟಿದ್ದರು. ಈ ಬಗ್ಗೆ ಬರ್ಕೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಗಿದೆ. ಈ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

    Post Views: 195

    Related Posts

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.