Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸರಕು ಸಾಗಾಟದ ರೈಲಿನಿಂದ ಅನಿಲ ಸೋರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸರಕು ಸಾಗಾಟದ ರೈಲಿನಿಂದ ಅನಿಲ ಸೋರಿಕೆ

    March 11, 2023
    Share

    ಮಂಗಳೂರು: ನಗರದಿಂದ ಹೊರಟಿದ್ದ ಸರಕು ಸಾಗಾಟದ ರೈಲಿನ ಗ್ಯಾಸ್ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾದ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜೋಕಟ್ಟೆ ಬಳಿ ರೈಲ್ವೆ ಹಳಿ ಸುತ್ತಮುತ್ತ ಜನಸಂಚಾರ ನಿರ್ಬಂಧ ಮಾಡಲಾಗಿರುವ ಘಟನೆ ಶುಕ್ರವಾರ ಸಂಜೆ ವೇಳೆಗೆ ನಡೆದಿದೆ. ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ (ಹೆಚ್‌ಪಿಸಿ) ಲಿಮಿಟೆಡ್‌ನಿಂದ ರೈಲು ಗ್ಯಾಸ್ ಟ್ಯಾಂಕರ್‌ಗಳಲ್ಲಿ ಅನಿಲ ತುಂಬಿಸಿ ಕಳುಹಿಸಲಾಗಿತ್ತು. ಆದರೆ ರೈಲು ಏಳು ಕಿ.ಮೀ. ತಲುಪಿದ ಬಳಿಕ ಗ್ಯಾಸ್ ಸೋರಿಕೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ. ರೈಲು ವಾಪಸ್ ಹೆಚ್ ಪಿಸಿಎಲ್‌ಗೆ ಆಗಮಿಸಿದೆ. ಗ್ಯಾಸ್ ಸೋರಿಕೆಯಾದ ಅನುಮಾನದ ಹಿನ್ನಲೆಯಲ್ಲಿ ಜೋಕಟ್ಟೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೆ ರೈಲ್ವೆ ಗೇಟ್ ಬಳಿ ಅಗ್ನಿಶಾಮಕ ವಾಹನ ನಿಯೋಜನೆ ಮಾಡಲಾಗಿದ್ದು, ರೈಲ್ವೆ ಹಳಿ ಸುತ್ತಮುತ್ತಲೂ ನಾಗರಿಕರು ಬಾರದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಘಟನೆಯಿಂದ ಜೋಕಟ್ಟೆ ಪ್ರದೇಶದ ಜನರು ಆತಂಕಿತರಾಗಿದ್ದರು.

    Post Views: 192

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.