ನವದೆಹಲಿ : ಮಾರ್ಚ್ 23 ರ ಇಂದಿನಿಂದ ಮೂರು ದಿನ ಕರ್ನಾಟಕ ಸೇರಿ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ಮುನ್ಸೂಚನೆ ನೀಡಿದೆ.
ಮಾರ್ಚ್ 23 ರಿಂದ ಮಾ.25 ರವರೆಗೆ ಭಾರತದಲ್ಲಿ ಆಲಿಕಲ್ಲು, ಗುಡುಗು ಸಹಿತ ಮಳೆಯಾಗಲಿರುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಮೇಲೆ, ಎರಡು ಆಂಟಿ ಸೈಕ್ಲೋನ್ಗಳು ರೂಪುಗೊಂಡಿದ್ದುಜೊತೆಗೆ, ಜೊತೆಗೆ ಇತರ ಕೆಳಮಟ್ಟದ ಸೈಕ್ಲೋನಿಕ್ ಪರಿಚಲನೆಗಳು ರೂಪುಗೊಂಡಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 23 ಮತ್ತು 25 ರ ನಡುವೆ ಕರ್ನಾಟಕ, ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಲಿದೆ : ಬಿ.ಎಸ್ ಯಡಿಯೂರಪ್ಪ
ತುಮಕೂರು: ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಲಿದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಇದೀಗ ಕಾಂಗ್ರೆಸ್ ಎಲ್ಲಿದೆ, ಅದರ ಕಾಲ ಯಾವಾಗೋ ಮುಗಿದು ಹೋಗಿದೆ. ತಮ್ಮ ಅಸ್ಥಿತ್ವಕ್ಕಾಗಿ ಕಾಂಗ್ರೆಸ್ ಹುಡುಕಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ ಎಂದರು.ನಾನು ಸಿಎಂ ಹುದ್ದೆಯನ್ನು ತ್ಯಜಿಸಿದ್ದೂ ಸಹ ಸ್ವಂತ ನಿರ್ಧಾರದಿಂದ. ನನಗೆ ಯಾರೂ ಬಲವಂತಮಾಡಿ ಅಧಿಕಾರದಿಂದ ಕೆಳಗೆ ಇಳಿಸಿಲ್ಲ. ಕಾಂಗ್ರೆಸ್ನ ಕೆಲವರು ನನ್ನ ರಾಜೀನಾಮೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ.ಇದರಲ್ಲಿ ಕಾಂಗ್ರೆಸ್ನವರು ಯಶಸ್ವಿಯೂ ಆಗುವುದಿಲ್ಲ. ಕಾಂಗ್ರೆಸ್ನವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.