Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯದ ಪಿಎಫ್ಐ ಕಚೇರಿ ಎನ್ಐಎ ವಶಕ್ಕೆ
    ಇತ್ತೀಚಿನ ಸುದ್ದಿ

    ಸುಳ್ಯದ ಪಿಎಫ್ಐ ಕಚೇರಿ ಎನ್ಐಎ ವಶಕ್ಕೆ

    March 27, 2023
    Share

    ಸುಳ್ಯ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಚೇರಿಯನ್ನು ಜಪ್ತಿ ಮಾಡಿದೆ

    ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿ ಪಿಎಫ್‌ಐ ಕಚೇರಿ ಇದ್ದು ಇದನ್ನು ವಶಕ್ಕೆ ಪಡೆದಿದೆ.

    ವಶಪಡಿಸಿಕೊಂಡ ಆಸ್ತಿಯ ಪ್ರತಿಯನ್ನು ಮಾಲೀಕರು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಸ್ತಿಯನ್ನು ಗುತ್ತಿಗೆ ಅಥವಾ ಬಾಡಿಗೆಗೆ ನೀಡಬಾರದು ಪರಾಬಾರೆ ಮಾಡಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ. ಯಾವುದೇ ಆಸ್ತಿಯನ್ನು ಕಚೇರಿಯಿಂದ ಸ್ಥಳಾಂತರಿಸುವುದು ಅಥವಾ ನವೀಕರಣ ಕಾರ್ಯವನ್ನು ಕೈಗೊಳ್ಳದಂತೆ ನಿರ್ದೇಶನಗಳನ್ನು ಎನ್‌ಐಎ ನೀಡಿದೆ.

    ಇದೇ ಕಚೇರಿಯಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ 20 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದು ,ಚಾರ್ಜ್ ಶೀಟ್‌ನಲ್ಲಿ 1,500 ಪುಟಗಳು ಮತ್ತು 240 ಸಾಕ್ಷಿಗಳ ಹೇಳಿಕೆಗಳಿವೆ.

    ಸುಳ್ಯ ಸಮೀಪದ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ರಾಜ್ಯದಲ್ಲಿ ಹಿಜಾಬ್ ಮತ್ತು ಹಲಾಲ್ ಬಿಕ್ಕಟ್ಟಿನ ಉತ್ತುಂಗದಲ್ಲಿದ್ದ ವೇಳೆ ಪ್ರವೀಣ್ ಅವರನ್ನು ಕಡಿದು ಕೊಲ್ಲಲಾಗಿತ್ತು.ಪ್ರವೀಣ್ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ನಡೆಸಿದ್ದರು.

    Post Views: 231

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.