Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸರ್ಕಾರಿ ಅನುದಾನದ ಫ್ಲೆಕ್ಸ್, ಬ್ಯಾನರ್, ರಾಜಕಾರಣಿಗಳ ಚಿತ್ರ ಕೂಡಲೇ ತೆರವು ಮಾಡಲು ಸೂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸರ್ಕಾರಿ ಅನುದಾನದ ಫ್ಲೆಕ್ಸ್, ಬ್ಯಾನರ್, ರಾಜಕಾರಣಿಗಳ ಚಿತ್ರ ಕೂಡಲೇ ತೆರವು ಮಾಡಲು ಸೂಚನೆ

    March 30, 2023
    Share

    ಮಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ಮಾ.29ರ ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ, ಕಾರಣ ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, 24, 72 ಗಂಟೆಯೊಳಗೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು

    ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟ್‍ಔಟ್‍ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕರ್ನಾಟಕ ತೆರೆದ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವ) ಕಾಯ್ದೆ-1981ರಂತೆ ಆರು ತಿಂಗಳ ಜೈಲು ಶಿಕ್ಷೆ, ಎರಡು ಸಾವಿರ ರೂ.ಗಳ ದಂಡ ವಿಧಿಸಬಹುದಾಗಿದೆ, ಅದನ್ನು ಅನುಷ್ಠಾನಗೊಳಿಸುವಂತೆಯೂ ಸಲಹೆ ನೀಡಿದರು.ಅದೇ ರೀತಿ ಸಂಬಂಧಿಸಿದ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ವರದಿ ನೀಡಬೇಕು, ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು, ನಿರ್ಲಕ್ಷ್ಯತನಕ್ಕೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುವಂತೆ ಎಚ್ಚರಿಕೆ ನೀಡಿದರು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಮಾತನಾಡಿ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ನೀಡಬೇಕಾದ ವರದಿಗಳನ್ನು ಕೂಡಲೇ ನೀಡುವಂತೆ ತಿಳಿಸಿದರು.

    ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

    Post Views: 255

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.