ಮಂಗಳೂರು : ದಕ್ಷಿಣ ಕನ್ನಡದಲ್ಲೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಮಗ್ನವಾಗಿದೆ. ಕ್ರಿಮಿನಲ್ ಚಟುವಟಿಕೆ, ಹಿಂದೆ ಗಂಭಿರ ಅಪರಾಧಗಳಲ್ಲಿ ತೊಗಡಿಗೊಂಡಿದ್ದವರ ಲೀಸ್ಟ್ ಸಿದ್ದ ಪಡಿಸಿ ಅವರ ಮೇಲೂ ಕ್ರಮ ಕೈಗೊಳ್ಳುವ ಕಾರ್ಯ ಆರಂಭಿಸಿದೆ. ಜಿಲ್ಲಾ ಕೇಂದ್ರ ಸ್ಥಾನ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾರ್ಚ್ 31 ರಂದು ಅಪರಾಧ ಚಟುವಟಿಗಳಲ್ಲಿ ಗುರುತಿಸಿಕೊಂಡಿದ್ದ ವಿವಿಧ ರೌಡಿ ಶೀಟರಗಳ ಮನೆಗಳಿಗೆ ದಾಳಿ ನಡೆಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪ್ರಮುಖ 60 ರೌಡಿ ಶೀಟರ್ ಗಳ ಮನೆಗೆ ಬೆಳಗ್ಗಿನ ಜಾವ ದಾಳಿ ನಡೆಸಿದ ಪೊಲೀಸ್ ಅಧಿಕಾರಿಗಳು ಮನೆಗಳನ್ನು ಶೋಧಿಸಿ ವಿಚಾರಣೆ ನಡೆಸಿದ್ದಾರೆ. ಆಯಾಯಾ ಪ್ರದೇಶಗಳಲ್ಲಿ ಪ್ರಾಬಲ್ಯವಿರುವ ರೌಡಿ ಶೀಟರ್‌ಗಳು ಚುನಾವಣೆಯಲ್ಲಿ ಪ್ರಭಾವ ಬೀರುವ ಸಾಧ್ಯತೆಗಳಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಈ ದಾಳಿಗಳನ್ನು ಸಂಘಟಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಉಪ ಆಯುಕ್ತರು ಮಾಹಿತಿ ನೀಡಿದ್ದಾರೆ