Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ನಾಪತ್ತೆಯಾಗಿದ ಬಾಲಕನ ಮೃತದೇಹ ಕೆರೆಯಲ್ಲಿ ಶವವಾಗಿ ಪತ್ತೆ
    ಇತ್ತೀಚಿನ ಸುದ್ದಿ

    ಬಂಟ್ವಾಳ : ನಾಪತ್ತೆಯಾಗಿದ ಬಾಲಕನ ಮೃತದೇಹ ಕೆರೆಯಲ್ಲಿ ಶವವಾಗಿ ಪತ್ತೆ

    April 9, 2023
    Share

    ಬಂಟ್ವಾಳ : ನಿನ್ನೆ ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬುವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ. ನಿನ್ನೆ ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ. ಬಾಲಕನನ್ನು ಸಾಕಷ್ಟು ಹುಡುಕಾಟ ನಡೆಸಿದರು ಸಿಕ್ಕಿರಲಿಲ್ಲ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಪೋಷಕರು ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಮೇಲ್ಭಾಗದಲ್ಲಿ ಬಾಲಕ ಧರಿಸಿದ್ದ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ತಡರಾತ್ರಿ ವೇಳೆ ಪತ್ತೆಯಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    Post Views: 237

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.