ಉಳ್ಳಾಲ:ಸಿಎಂ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಗೆ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಆಡಂಕುದ್ರು ಬಳಿ ಸಂಭವಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಳ್ಳಾಲದ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆ ರಾ.ಹೆ.66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆ ಮಂಜುನಾಥ ಹೆಗಡೆ ಟೆಂಪೂ ಢಿಕ್ಕಿಯಾಗಿ ಗಾಯಗೊಂಡಿದ್ದಾರೆ.
ಮಂಜುನಾಥ್ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ವಾಹನಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ಕಳೆದು ಪೊಲೀಸ್ ಪೇದೆಗೆ ಢಿಕ್ಕಿ ಹೊಡೆದಿದೆ.
ಪೇದೆಗೆ ತಲೆ ಹಾಗು ಕೈಗಳಿಗೆ ಗಾಯಗೊಂಡಿದ್ದು ಪೇದೆಯನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.