Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ನನ್ನ ಜೀವಕ್ಕೆ ಅಪಾಯ ಸಂಭವಿಸಿದರೆ ಯಾರೂ ಕಾರಣರಲ್ಲ- ರಹೀಂ ಉಚ್ಚಿಲ್ ..!
    ಇತ್ತೀಚಿನ ಸುದ್ದಿ

    ಮಂಗಳೂರು : ನನ್ನ ಜೀವಕ್ಕೆ ಅಪಾಯ ಸಂಭವಿಸಿದರೆ ಯಾರೂ ಕಾರಣರಲ್ಲ- ರಹೀಂ ಉಚ್ಚಿಲ್ ..!

    April 24, 2023
    Share

    ಮಂಗಳೂರು: ಹನ್ನೊಂದು ವರ್ಷಗಳಿಂದ ಸರ್ಕಾರ ನನಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ‌ ಉಚ್ಚಿಲ್ ಹೇಳಿದ್ದಾರೆ. ತಾಯಿ ಜತೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 2012 ರಲ್ಲಿ ಅಕಾಡೆಮಿ ಅಧ್ಯಕ್ಷನಾಗಿದ್ದಾಗ ಏಳು ಮಂದಿಯ ತಂಡ ಕಚೇರಿಗೆ ನುಗ್ಗಿ ಯದ್ವಾತದ್ವಾ ಕೊಚ್ಚಿ ಕೊಲೆಯತ್ನ ನಡೆಸಿತ್ತು. ಅದರಲ್ಲಿ ಇಬ್ಬರು ಆರೋಪಿಗಳ ಆರೋಪ ಸಾಬೀತಾಗಿ ನ್ಯಾಯಾಲಯ ನಾಲ್ಕೂವರೆ ವರ್ಷ ಸಜೆ ವಿಧಿಸಿದೆ. ಆರೋಪಿಗಳು ಇದರ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಅಲ್ಲಿ ತೀರ್ಪು ಬರುವ ಮೊದಲೇ ಗನ್ ಮ್ಯಾನ್ ಭದ್ರತೆ ವಾಪಸ್ ಪಡೆದುಕೊಳ್ಳಲಾಗಿದೆ. ಇದರಿಂದ ಭಯ ಮತ್ತು ನನಗೆ ಆತಂಕ ನನ್ನನ್ನು ಕಾಡುತ್ತಿದೆ ಎಂದರು. ನನ್ನ ತಾಯಿಯವರ ಮನವೊಲಿಸಿ ಪ್ರಕರಣವನ್ನು ಹಿಂದಕ್ಕೆ ಪಡೆಯಲು ಆರೋಪಿಗಳು ಪ್ರಯತ್ನಿಸಿದ್ದಾರೆ. ಅಷ್ಟೇ ಅಲ್ಲ ನನ್ನ ಗನ್‌ಮ್ಯಾನ್‌ಗೂ ಬೆದರಿಕೆ ಹಾಕಿದ್ದರು. ಇಷ್ಟೆಲ್ಲಾ ಇದ್ದರೂ ನನ್ನ ಗನ್‌ಮ್ಯಾನ್‌ ಹಿಂದಕ್ಕೆ ಪಡೆದುಕೊಂಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದದ ರಹೀಂ ಉಚ್ಚಿಲ್ ನನಗೆ ಬಂದ ಹಲವಾರು ಬೆದರಿಕೆ ಕರೆಯನ್ನು ನಾನು ಗಣನೆಗೆ ತೆಗೆದು ಕೊಳ್ಳದಿದ್ದರೂ ,ಅತ್ಯಂತ ಗಂಭೀರ ವಾದ ಆಧಾರ ಸಹಿತವಾದ ಸುಮಾರು 30 ಕಿಂತಲೂ ಅಧಿಕ ದೂರು ಮಂಗಳೂರು ದಕ್ಷಿಣ ಠಾಣೆ ,ಹುಬ್ಬಳ್ಳಿ ಮುಂತಾದಕಡೆ ದಾಖಲಾಗಿದೆ . ಬೇರೆ ಬೇರೆ ಪೊಲೀಸ್ ಆಯುಕ್ತರ ನಿರ್ದೇಶನದಂತೆ ನನ್ನ ಕುರಿತು ಬೆದರಿಕೆ ಕರೆ ಸ್ವೀಕರಿಸಿದ ನನ್ನ ಗನ್ ಮ್ಯಾನ್ ಗಳೂ ವಾಯ್ಸ್ ಸಂದೇಶ ಸಹಿತ ಮಂಗಳೂರು ದಕ್ಷಿಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಎಲ್ಲಾ ತನಿಖೆ ಪ್ರಗತಿಯಲ್ಲಿರುವಾಗಲೇ ನನ್ನ ಗನ್ ಮ್ಯಾನ್ ಭದ್ರತೆ ಹಿಂಪಡೆದಿದ್ದು ಆಶ್ಚರ್ಯ ಹಾಗೂ ಭಯವನ್ನುಂಟು ಮಾಡಿದೆ ಎಂದರು. ನನಗೆ ಗನ್ ಮ್ಯಾನ್ ಭದ್ರತೆ ಮುಂದುವರೆಸುವಂತೆ ಡಿಸಿಪಿಯವರಿಗೆ ಮನವಿ ಮಾಡಿದ್ದೇನೆ. ಆದರೂ ಪ್ರಯೋಜನವಾಗಿಲ್ಲ. ನನ್ನ ಜೀವಕ್ಕೆ ಅಪಾಯ ಸಂಭವಿಸಿದರೆ ಯಾರೂ ಕಾರಣರಲ್ಲ, ನನ್ನ ಆಯುಷ್ಯವೇ ಕಾರಣವಾಗಿರುತ್ತದೆ ಎಂದು ಮಾರ್ಮಿಕವಾಗಿ ರಹೀಂ ಉಚ್ಚಿಲ್ ಹೇಳಿದ್ದಾರೆ.

    Post Views: 274

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.