Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆ ಮೂಲ್ಕಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: ಪ್ರಧಾನಿ ಮೋದಿ ಭಾಗಿ- ಸಂಚಾರದಲ್ಲಿ ಬದಲಾವಣೆ
    ಇತ್ತೀಚಿನ ಸುದ್ದಿ

    ನಾಳೆ ಮೂಲ್ಕಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: ಪ್ರಧಾನಿ ಮೋದಿ ಭಾಗಿ- ಸಂಚಾರದಲ್ಲಿ ಬದಲಾವಣೆ

    May 2, 2023
    Share

    ಮಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ವಿವಿಧ ಪಕ್ಷದ ಪ್ರಮುಖ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಗೆ ಆಗಮಿಸಲಿದ್ದು,  ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

    ಈ  ಹಿನ್ನಲೆಯಲ್ಲಿ ಭದ್ರತೆ  ಹಾಗೂ ಸಂಚಾರ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬೆಳಗ್ಗೆ 7ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ  ಸಮಾವೇಶ ಸ್ಥಳದ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುದೀಪ್ ಕುಮಾರ್ ಜೈನ್ ಹೇಳಿದ್ದಾರೆ.

    ಬೆಳಗ್ಗೆ 10:30ರ ನಂತರ  ಮೂಲ್ಕಿಯ ಕೊಲ್ನಾಡ್ ನ ಹೆಲಿಪ್ಯಾಡ್ ನಿಂದ ಕಾರ್ಯಕ್ರಮಕ್ಕೆ ಹೋಗುವ ಸ್ಥಳದಲ್ಲಿ ಹಾಗೂ ಹಳೆಯಂಗಡಿ ಜಂಕ್ಷನ್ ಬಳಿಯ ಕಾರ್ನಾಡ್ ಬೈಪಾಸ್ ಬಳಿ ಕಾರ್ಯಕ್ರಮಕ್ಕೆ ಬರುವ ವಾಹನವನ್ನು ಬಿಟ್ಟು ಉಳಿದ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಸದ್ಯ ಉಡುಪಿ ಕಡೆಯಿಂದ ಮಂಗಳೂರು ಹಾಗೂ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುವವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುವ ಎಲ್ಲ ರೀತಿಯ ವಾಹನಗಳು ಮೂಲ್ಕಿ ವಿಜಯ ಸನ್ನಿಧಿಯ ಬಳಿ ಎಡಕ್ಕೆ ಚಲಿಸಿ ಕಿನ್ನಿಗೋಳಿ, ಕಟೀಲ್‌, ಬಜಪೆ, ಕಾವೂರು ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸಬೇಕು.ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಎಲ್ಲ ರೀತಿಯ ವಾಹನಗಳು ಕೆ.ಪಿ.ಟಿ ಜಂಕ್ಷನ್‌ನಲ್ಲಿ ಬಲಕ್ಕೆ ಚಲಿಸಿ ಬೊಂದೇಲ್‌ – ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ – ಮುಲ್ಕಿ ಕಡೆಗೆ ಸಂಚರಿಸಬಹುದು.

    ಕೂಳೂರು ಜಂಕ್ಷನ್‌ನಿಂದಲೂ ಕಾವೂರು ಮೂಲಕ ಸಂಚರಿಸಬಹುದು. ಸುರತ್ಕಲ್‌ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಹಳೆಯಂಗಡಿ ಜಂಕ್ಷನ್‌ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ ಎಸ್‌-ಕೋಡಿ ಮಾರ್ಗವಾಗಿ ಮೂಲ್ಕಿ ಮೂಲಕ ಸಂ‌ಚರಿಸಬಹುದು.ಮೇ 3ರಂದು ಬೆಳಗ್ಗೆ 7ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಹಳೆಯಂಗಡಿ ಜಂಕ್ಷನ್‌ನಿಂದ ಮೂಲ್ಕಿ ವಿಜಯ ಸನ್ನಿಧಿವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಎರಡು ಬದಿಯ ರಸ್ತೆಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಇತರೆ ಎಲ್ಲ ವಾಹನ ಸಂಚಾರ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಲ್ನಾಡು ಜಂಕ್ಷನ್‌ನಿಂದ ಕೈಗಾರಿಕಾ ಪ್ರದೇಶಕ್ಕೆ ಹಾಗೂ ಕೆ.ಎಸ್‌. ರಾವ್‌ ನಗರಕ್ಕೆ ಹೋಗುವ ರಸ್ತೆಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಬರುವ ವಾಹನ ಹೊರತುಪಡಿಸಿ ಇತರೆ ಎಲ್ಲ ವಾಹನಗಳ ಸಂಚಾರ ನಿಷೇಧಿಸಿದೆ. ತುರ್ತು ಸೇವೆಯ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿದೆ.

    Post Views: 213

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.