Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮತದಾರರಲ್ಲದವರು ಮೇ 8 ರಂದು ಕ್ಷೇತ್ರ ತೊರೆಯಲು ಜಿಲ್ಲಾಧಿಕಾರಿ ಸೂಚನೆ
    ಇತ್ತೀಚಿನ ಸುದ್ದಿ

    ಮತದಾರರಲ್ಲದವರು ಮೇ 8 ರಂದು ಕ್ಷೇತ್ರ ತೊರೆಯಲು ಜಿಲ್ಲಾಧಿಕಾರಿ ಸೂಚನೆ

    May 6, 2023
    Share

    ಉಡುಪಿ : ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

    ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನವು ಮೇ 10 ರಂದು ನಡೆಯಲಿದ್ದು, ಚುನಾವಣೆಯು ಮುಕ್ತ , ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಬೇಕಾದ ಹಿನ್ನಲೆ, ಮತದಾನದ ಅಂತ್ಯದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರಗಳನ್ನು ಕೈಗೊಳ್ಳಲು ಅನುಮತಿ ಇರುವುದಿಲ್ಲ, ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರಲ್ಲದವರು ನಿಗಧಿತ ಸಮಯಕ್ಕಿಂತ ಮುಂಚೆ ಹೊರಹೋಗಬೇಕು ಎಂದರು ಯಾವುದೆ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ ಅಥವಾ ಅಧಿಕೃತ ಅಭ್ಯರ್ಥಿಗಳ ಪ್ರಚಾರಕ್ಕಾಗಿ ವಿಧಾನಸಭಾ ಕ್ಷೇತ್ರದ ಹೊರಗಿನಿಂದ ಬಂದು ಉಳಿದುಕೊಂಡಿದ್ದಲ್ಲಿ ಅಂತಹವರು ನಿಗಧಿಪಡಿಸಿರುವ ಕಾಲಕ್ಕಿಂತ ಮುಂಚೆ ಕ್ಷೇತ್ರದಿಂದ ಹೊರಗೆ ಹೋಗಬೇಕು ಒಂದೊಮ್ಮೆ ಯಾವುದೇ ವಸತಿಗೃಹಗಳಲ್ಲಿ , ಕಲ್ಯಾಣ ಮಂಟಪಗಳಲ್ಲಿ ಉಳಿದುಕೊಂಡಿದ್ದಲ್ಲಿ ಅಂತಹವರಿಗೆ ಆಸ್ಪದ ನೀಡಬಾರದು. ಅನಧಿಕೃತವಾಗಿ ಉಳಿದುಕೊಂಡಿರುವ ಬಗ್ಗೆ ಮಾಹಿತಿಯಿದ್ದಲ್ಲಿ ಜಿಲ್ಲಾಡಳಿತ ಅಥವಾ ಜಿಲ್ಲಾ ಪೊಲೀಸ್ ಇಲಾಖೆಗೆ ಮಾಹಿತಿಗೆ ನೀಡಬೇಕು ಎಂದರು.

    ಈ ಬಗ್ಗೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಆಗಾಗ್ಗೆ ಪರಿಶೀಲಿಸಲಿದ್ದಾರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರಲ್ಲದ ರಾಜಕೀಯ ಕಾರ್ಯಕರ್ತರು ,ಪಕ್ಷದ ಸಂಘಟಕರು, ಸೇರಿದಂತೆ ಮತ್ತಿತರರು ಅನಧಿಕೃತವಾಗಿ ನೆಲೆಸಿದ್ದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ಅವರಿಗೆ ಆಶ್ರಯ ನೀಡುವವರ ಮೇಲೆಯೂ ಸಹ ಕ್ರಮ ಕೈಗೊಳ್ಳಲಾಗುವುದು ಎಂದರು. ಮತದಾನಕ್ಕೆ ನಿಗಧಿಪಡಿಸಿದ ಅವಧಿ ಕೊನೆಗೊಳ್ಳುವುದಕ್ಕಿಂತ 48 ಗಂಟೆಗಳ ಮುಂಚೆ ಯಾವುದೇ ಮುದ್ರಣ ಮಾದ್ಯಮಗಳಲ್ಲಿ ಜಾಹೀರಾತು ಪ್ರಕಟಸಬೇಕಾದರೆ ಸಂಬಂಧಪಟ್ಟ ಅಭ್ಯರ್ಥಿಗಳು ಅಥವಾ ಪಕ್ಷವು ಮಾಧ್ಯಮ ಪ್ರಾಮಾಣಿಕರಣ ಸಮಿತಿ ವತಿಯಿಂದ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು.

    ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 10 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಮೇ 12 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 13 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಲಾಗಿದ್ದು, ಯಾವುದೇ ವಸತಿಗೃಹಗಳಲ್ಲಿ, ಕಲ್ಯಾಣ ಮಂಟಪಗಳು ಸೇರಿದಂತೆ ಮತ್ತಿತರ ಎಲ್ಲಾ ಸಭಾಂಗಣಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು.

    Post Views: 257

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.