Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜಕೀಯ»ಇಂದು ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋಗೆ ಜನಸಾಗರ
    ರಾಜಕೀಯ

    ಇಂದು ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋಗೆ ಜನಸಾಗರ

    May 6, 2023
    Share

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆಸುತ್ತಿರುವ ಮೆಗಾ ರೋಡ್‌ ಶೋಗೆ ಭಾರೀ ಜನಬೆಂಬಲ ವ್ಯಕ್ತವಾಗಿದೆ.

    ರಸ್ತೆಯ ಎರಡೂ‌ ಕಡೆ ಲಕ್ಷಾಂತರ ಜನ ನಿಂತು ಮೋದಿಯವರತ್ತ ಕೈಬೀಸುತ್ತಾ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ. ಮಹಿಳೆಯರು, ಮಕ್ಕಳೂ ಮೋದಿಯವರನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಸೇರಿರುವುದು ವಿಶೇಷ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ದಾರಿಯುದ್ದಕ್ಕೂ ಅಭಿಮಾನಿಗಳು ಹೂವಿನ ಸುರಿಮಳೆ ಸುರಿಸುತ್ತಿದ್ದಾರೆ. ಮೋದಿ ಜನರತ್ತ ಕೈ ಮುಗಿಯುತ್ತಿದ್ದಾರೆ. ರೋಡ್ ಶೋ ಸಾಗುತ್ತಿರುವ ರಸ್ತೆಗಳಲ್ಲಿ ಅಲ್ಲಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುತ್ತಿವೆ. ಮೋದಿಯವರಿಗೆ‌ ಜೈಕಾರ ಹಾಕುತ್ತಿದ್ದಾರೆ.

    ಪ್ರಧಾನಿಯವರ ರೋಡ್ ಶೋ ಸಾಗುತ್ತಿರುವ ಮಾರ್ಗಗಳಲ್ಲಿ ಜನರ ಓಡಾಟಕ್ಕೆ, ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಜೆಪಿ ನಗರದ ಸೋಮೇಶ್ವರ ಸಭಾಭವನದಿಂದ ಹೊರಟ ಪ್ರಧಾನಿ ಮೋದಿ ರೋಡ್‌ ಶೋ ಭಾರೀ ಭದ್ರತೆಯೊಂದಿಗೆ ಸಾಗುತ್ತಿದೆ. ಪ್ರಧಾನಿ ಮೋದಿಯವರಿಗೆ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಜತೆಯಾಗಿದ್ದಾರೆ. ಚಾಮರಾಜಪೇಟೆ, ರಾಜಾಜಿನಗರ, ವಿಜಯನಗರ, ಬಸವೇಶ್ವರ ನಗರ ಹಾಗೂ ಮಲ್ಲೇಶ್ವರಂನಲ್ಲಿ ರೋಡ್‌ ಶೋ ಸಾಗಲಿದೆ.

    Post Views: 247

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.