Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ
    ಕರಾವಳಿ ಸುದ್ದಿ

    ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

    May 8, 2023
    Share

    ಮೈಸೂರು: ನಾಡ‌ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ.

    ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ ಸೌಮ್ಯ ಸ್ವಭಾವದ ಬಲರಾಮನ ಬಾಯಲ್ಲಿ ಹುಣ್ಣಾಗಿತ್ತು. ಕಳೆದ ಹತ್ತು ದಿನಗಳಿಂದ ನೋವಿನಿಂದ ಬಳಲುತ್ತಿದ್ದ ಬಲರಾಮನಿಗೆ ಆಹಾರ ಸೇವನೆ ಕಷ್ಟವಾಗುತ್ತಿತ್ತು. ಕೂಡಲೇ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.

    ವಿಶ್ವ ಪ್ರಸಿದ್ಧ ಮೈಸೂರು ದಸರಾ ಮೆರವಣಿಗೆಯ ಪ್ರಮುಖ ಆನೆಗಳಲ್ಲಿ ಬಲರಾಮನೂ ಒಬ್ಬನಾಗಿದ್ದ. ಬಲರಾಮನನ್ನು 1987 ರಲ್ಲಿ ಕರ್ನಾಟಕದ ಕೊಡಗು ಪ್ರದೇಶದ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು. ನಂತರ ಈತನನ್ನು ತರಬೇತಿ ಮೂಲಕ ಪಳಗಿಸಲಾಗಿತ್ತು. ದ್ರೋಣನ ನಂತರ ಅಂಬಾರಿಯನ್ನು ಹೊರಲು ಬಲರಾಮ ಆಯ್ಕೆಯಾದನು. ಆದರೆ ಅಂಬಾರಿ ಹೊರಲು ಬಲರಾಮ ಮೊದಲ ಆಯ್ಕೆಯಾಗಿರಲಿಲ್ಲ. 5,600 ಕಿಲೋ ತೂಕ ಇರುವ ಆನೆ ಅರ್ಜುನ, ಆಕಸ್ಮಿಕವಾಗಿ ಮಾವುತನನ್ನು ಕೊಂದಿದ್ದಕ್ಕಾಗಿ ಅಂಬಾರಿ ಹೊರುವ ಅವಕಾಶದಿಂದ ವಂಚಿತನಾಗಿದ್ದನು. ಹೀಗಾಗಿ ಬಲರಾಮನನ್ನು ಆಯ್ಕೆ ಮಾಡಲಾಯಿತು. ಅದರಂತೆ 1999 ಮತ್ತು 2011 ರ ನಡುವೆ ಒಟ್ಟು 14 ಬಾರಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗಿದ್ದನು.

    Post Views: 459

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.