Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಉಡುಪಿ: ‘ಚುನಾವಣಾ ಪ್ರಕ್ರಿಯೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ದ’ – ಜಿಲ್ಲಾಧಿಕಾರಿ
    ಕರಾವಳಿ ಸುದ್ದಿ

    ಉಡುಪಿ: ‘ಚುನಾವಣಾ ಪ್ರಕ್ರಿಯೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ದ’ – ಜಿಲ್ಲಾಧಿಕಾರಿ

    May 8, 2023
    Share

    ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಮತದಾನವು ಮೇ 10ರಂದು ಪೂರ್ವಾಹ್ನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಜರುಗಲಿದ್ದು, ಈ ಬಗ್ಗೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ತಿಳಿಸಿದರು.

    ಅವರು ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ವಿವರಣೆ ನೀಡಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಮತದಾನವು ಮೇ ೧೦ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಜರುಗಲಿದ್ದು, ಈ ಬಗ್ಗೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ.ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳಿಗೆ ಅಂತಿಮ ಮತದಾರರ ಪಟ್ಟಿಯ ಪ್ರತಿಯನ್ನು ನೀಡಲಾಗಿದೆ.

    ಎಲ್ಲಾ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತಗಟ್ಟೆಗಳ ಪಟ್ಟಿಯನ್ನು ಒದಗಿಸಲಾಗಿದೆ.ಮತದಾರರು EPIC CARD ಅಥವಾ ಚುನಾವಣಾ ಆಯೋಗ ಅನುಮೋದಿಸಿದ ಆಧಾರ್ ಕಾರ್ಡ್,ನರೇಗಾ ಉದ್ಯೋಗ ಗುರುತಿನ ಚೀಟಿ,, ಅಂಚೆ ಕಛೇರಿ ಮತ್ತು ಬ್ಯಾಂಕ್‌ಗಳಲ್ಲಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ ಗುರುತಿನ ದಾಖಲೆಗಳೊಂದಿಗೆ ಹಾಜರಾಗಬೇಕು.ವಿಶೇಷ ಚೇತನ (ದೈಹಿಕ ದುರ್ಬಲ) ಮತದಾರರಿಗಾಗಿ ಗಾಲಿ ಕುರ್ಚಿ, ಭೂತಕನ್ನಡಿ (Magnified glass) ಬೈಲ್ ಲಿಪಿಯ ಮಾದರಿ ಮತಪತ್ರ ಆದ್ಯತೆ ಮೇಲೆ ಪ್ರವೇಶ, ರ್ಯಾಂಪ್ ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಲಾಗಿದೆ.ಜಿಲ್ಲೆಯ ಉಡುಪಿ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ – ಡಿ ಮಸ್ಟರಿಂಗ್ ಪ್ರಕ್ರಿಯೆ ಉಡುಪಿಯ ಸೈಂಟ್ ಸಿಸಿಲಿಸ್ ಎಜುಕೇಶನ್ ಟ್ರಸ್ಟ್ ನಲ್ಲಿ, ಕುಂದಾಪುರ ಕ್ಷೇತ್ರ ದ ಪ್ರಕ್ರಿಯೆ ಭಂಡಾರ್ಕಾಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಬೈಂದೂರು – ಸರಕಾರಿ ಪದವಿ ಪೂರ್ವ ಕಾಲೇಜು, ಕಾಪು – ದಂಡತೀರ್ಥ ಪಿಯು ಕಾಲೇಜು, ಕಾರ್ಕಳ – ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.”ಈಗಾಗಲೆ ಒಟ್ಟು ರೂ 2,14,91,030 ನಗದನ್ನು ಹಾಗೂ 42313.13 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

    ವಸತಿಗೃಹ, ಲಾಡ್ಡಿಂಗ್, ಧರ್ಮಶಾಲೆ, ಯಾತ್ರಿ ನಿವಾಸಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕೊನೆಯ 48ಕಡೆಗಳಲ್ಲಿ ಉಡುಪಿ ಜಿಲ್ಲೆಯ ಮತದಾರರಲ್ಲದವರು ಈ ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ ಎಂದು ಸ್ವಷ್ಟ ಸೂಚನೆಯನ್ನು ಕೂಡಾ ನೀಡಲಾಗಿದೆ” ಎಂದರು.ಉಡುಪಿ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಹಾಕೈ ಅಕ್ಷಯ್ ಮಚೀಂದ್ರ ಮಾತನಾಡಿ “ಜಿಲ್ಲೆಯಲ್ಲಿ 19 ಅರೆಸೇನಾ ಪಡೆಗಳನ್ನು ನಿಯೋಜನೆ ‌ಮಾಡಲಾಗಿದೆ. ಈಗಾಗಲೇ ಜನರಲ್ಲಿ ವಿಶ್ವಾಸ ತುಂಬಲು ಮತ್ತು ಸುವ್ಯವಸ್ಥಿತ ರೀತಿಯಲ್ಲಿ ಚುನಾವಣಾ ಪ್ರಕ್ರಿಯೆಯ ನ್ನು ನಡೆಸಲು ಜಿಲ್ಲೆಯಲ್ಲಿ 90 ರೂಟ್ ಮಾರ್ಚ್ ಗಳನ್ನು ಮಾಡಲಾಗಿದೆ. 741 ಪ್ರಕರಣದಲ್ಲಿ 850 ಕ್ಕೂ ಹೆಚ್ಚು ಜನರಿಂದ ಬಾಂಡಿಂಗ್ ಮಾಡಿಸಿದ್ದು, ಇದರಲ್ಲಿ ಮತ್ತೆ ತಪ್ಪು ಮಾಡಿದ 7 ಜನರಿಂದ 7 ಲಕ್ಷ ದಂಡ ವಸೂಲಿ ಮಾಡಿದೆ. 13 ಜನರನ್ನು ಗಡಿಪಾರು ಮಾಡಿದೆ, 2 ಜನರ ನ್ನು ಗುಂಡಾ ಕಾಯ್ದೆಯಡಿ ಬಂಧಿಸಿದೆ. 3300 ಆಯುಧಗಳಲ್ಲಿ 27 ಹೊರತುಪಡಿಸಿ ಉಳಿದ ಎಲ್ಲಾ ಆಯುಧಗಳನ್ನು ಠೇವಣಿ ಮಾಡಲಾಗಿದೆ. ಜಿಲ್ಲೆಯಲ್ಲಿ ನಡೆದ ಎಲ್ಲಾ ಪ್ರಚಾರ ಕಾರ್ಯ ಕ್ರಮಗಳಿಗೆ ಸೂಕ್ತ ಭದ್ರತೆ ಒದಗಿಸಿದೆ. ಮತದಾನ ದಿನದಂದು 73 ವಿಶೇಷ ಸೆಕ್ಟರ್ ಗಳ ಮೂಲಕ ಎಲ್ಲಾ ಮತಗಟ್ಟೆಗಳ ನಿಗಾ ವಹಿಸಲಾಗುವುದು” ಎಂದರು.

    Post Views: 240

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.