Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ಜಾಹೀರಾತು ಪ್ರಸಾರ ಕುರಿತಂತೆ ಮಾಧ್ಯಮಗಳಿಗೆ ಮಾರ್ಗಸೂಚಿ
    ಇತ್ತೀಚಿನ ಸುದ್ದಿ

    ಚುನಾವಣಾ ಜಾಹೀರಾತು ಪ್ರಸಾರ ಕುರಿತಂತೆ ಮಾಧ್ಯಮಗಳಿಗೆ ಮಾರ್ಗಸೂಚಿ

    May 9, 2023
    Share

    ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ.

    ಚುನಾವಣಾ ಸಂಬಂಧೀ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.ಟಿವಿ/ರೇಡಿಯೋ/ಕೇಬಲ್ ನೆಟ್.ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು.ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 126 ರ ವ್ಯಾಪ್ತಿಯಲ್ಲಿ ಬರುತ್ತದೆ.

    ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಅಂಗವಾಗಿ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದ್ದರಿಂದ ಎಲ್ಲ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮಗಳು ಮೇ 8 ರ ಸಂಜೆ 6 ಗಂಟೆಯಿಂದ ಮೇ 10 ರ ಸಂಜೆ 6.30 ಗಂಟೆಯವರೆಗೆ ಮೇಲ್ಕಂಡ ನಿರ್ದೇಶನಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

    Post Views: 227

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.