ಇಸ್ಲಾಮಾಬಾದ್; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನವನ್ನು ಖಂಡಿಸಿ ದೇಶದಾದ್ಯಂತ ಹಿಂಸಾಚಾರ ನಡೆದಿದೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸಿದೆ.
ಇದಾದ ಬಳಿಕ ಪಾಕಿಸ್ತಾನ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಪಾಕಿಸ್ತಾನ ಸೇನೆಯ ರಾವಲ್ಪಿಂಡಿ ಪ್ರಧಾನ ಕಚೇರಿಯನ್ನು ಧ್ವಂಸಗೊಳಿಸಲಾಗಿದ್ದು,. ಕಾರ್ಪ್ಸ್ ಕಮಾಂಡರ್ ಮನೆಗೆ ಇಮ್ರಾನ್ ಖಾನ್ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲದೆ ಪಾಕ್ ಸೇನೆಯು ಪ್ರತಿಭಟನಾಕಾರರಿಗೆ ಕಂಡಲ್ಲಿ ಗುಂಡಿಕ್ಕುವ ಆದೇಶವನ್ನು ನೀಡಿದೆ.