Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್‌: ಸ್ಟ್ರಾಂಗ್ ರೂಂ ಬೀಗದ ಕೀಯನ್ನು ಕಳೆದು ಹಾಕಿದ ಅಧಿಕಾರಿಗಳು
    ಇತ್ತೀಚಿನ ಸುದ್ದಿ

    ಸುರತ್ಕಲ್‌: ಸ್ಟ್ರಾಂಗ್ ರೂಂ ಬೀಗದ ಕೀಯನ್ನು ಕಳೆದು ಹಾಕಿದ ಅಧಿಕಾರಿಗಳು

    May 13, 2023
    Share

    ಮಂಗಳೂರು: ಸುರತ್ಕಲ್‌ನ ಎನ್‌ಐಟಿಕೆ ಕಾಲೇಜಿನಲ್ಲಿ ಮತ ಎಣಿಕೆಗೂ ಮುನ್ನ ಸ್ಟ್ರಾಂಗ್ ರೂಂ ತೆರೆಯುವ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂನ ಬೀಗದ ಕೀಯನ್ನು ಅಧಿಕಾರಿಗಳು ಕಳೆದುಹಾಕಿದ್ದರು. ಕೊನೆಗೆ ಜಿಲ್ಲಾಧಿಕಾರಿ ಬಡಗಿಯನ್ನು ಕರೆಸಿ ಬೀಗ ತುಂಡರಿಸಿದ ಘಟನೆಯೂ ನಡೆಯಿತು. ಸದ್ಯ ಅಂಚೆ ಮತ ಎಣಿಕೆ ಆರಂಭವಾಗಿದ್ದು, ಭಾರೀ ಭದ್ರತೆ ಏರ್ಪಡಿಸಲಾಗಿದೆ.

    ದ.ಕ ಜಿಲ್ಲೆಯ ಎಂಟು ಕ್ಷೇತ್ರಗಳ ಒಟ್ಟು 60 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 8 ಕ್ಷೇತ್ರಗಳ ಇವಿಎಂಗೆ ಒಟ್ಟು 112 ಹಾಗೂ ಪೋಸ್ಟಲ್ ಬ್ಯಾಲೆಟ್ ಗೆ 40 ಟೇಬಲ್ ಅಳವಡಿಕೆ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಇವಿಂಗೆ 14 ಟೇಬಲ್ ಗಳನ್ನು ಹಾಕಲಾಗಿದೆ. ಪೋಸ್ಟಲ್ ಬ್ಯಾಲೆಟ್ ಗಾಗಿ 5 ಟೇಬಲ್ ಗಳನ್ನ ಮಾಡಲಾಗಿದೆ.

    ಬೆಳಿಗ್ಗೆ 8 ಗಂಟೆಗೆ ಮೊದಲು ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಿದ್ದು, 8.30ರಿಂದ ಇವಿಎಂ ಮತ ಎಣಿಕಾ ಕಾರ್ಯ ಆರಂಭವಾಗಲಿದೆ. ಪ್ರತೀ ಕ್ಷೇತ್ರದ 19 ಟೇಬಲ್ ಗೂ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಒಟ್ಟು 16 ರಿಂದ 18 ಸುತ್ತುಗಳಲ್ಲಿ ಎಣಿಕಾ ಕಾರ್ಯ ಶುರು ಮಾಡಲಾಗಿದೆ. 544 ಸಿಬ್ಬಂದಿ ಇಡೀ ಎಣಿಕಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

    304 ಹೆಡ್ ಕಾನ್ಸ್‌ಟೇಬಲ್, 39 ಎಎಸ್ಸೈ, 35 ಪಿಎಸ್ಸೈ, 14 ಇನ್ಸ್ಪೆಕ್ಟರ್, 06 ಎಸಿಪಿ, 2 ಡಿಸಿಪಿ, 400 ಸಿವಿಲ್ ಪೊಲೀಸ್, 200 ಹೋಂ ಗಾರ್ಡ್, 4 ಸಿಎಆರ್ ತುಕಡಿ, 2 ಕೆಎಸ್ಸಾರ್ಪಿ ತುಕಡಿ ಹಾಗೂ ಸಿಆರ್ಪಿಎಫ್, ಸಿಐಎಸ್ಎಫ್ ಭದ್ರತೆ ಕೈಗೊಳ್ಳಲಾಗಿದೆ.

    ಮಂಗಳೂರು -15, ಮಂಗಳೂರು ದಕ್ಷಿಣ- 18, ಮಂಗಳೂರು ಉತ್ತರ- 18, ಬೆಳ್ತಂಗಡಿ- 18, ಮೂಡಬಿದ್ರೆ- 16, ಬಂಟ್ವಾಳ- 18, ಪುತ್ತೂರು-16, ಸುಳ್ಯ- 17 ಸುತ್ತು ಮತ ಎಣಿಕೆ ಮಾಡಲಾಗುತ್ತಿದೆ.

    Post Views: 233

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.