ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಹರ್ಯಾಣ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶದ 6 ರಾಜ್ಯಗಳ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಭಯೋತ್ಪಾದಕ, ಮಾದಕ ದ್ರವ್ಯ ಕಳ್ಳಸಾಗಣೆದಾರರು, ದರೋಡೆಕೋರರ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿದೆ.
ರಾಜ್ಯ ಪೊಲೀಸ್ ಪಡೆಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಭಯೋತ್ಪಾದನಾ ನಿಗ್ರಹ ಸಂಸ್ಥೆ ಬುಧವಾರ ಮುಂಜಾನೆಯಿಂದ ಶಂಕಿತರಿಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಈ ದಾಳಿಗಳನ್ನು ನಡೆಸಿದ್ದು, ದಾಳಿಗಳು ಇನ್ನೂ ಮುಂದುವರೆಯಲಿವೆ ಎನ್ನಲಾಗಿದೆ.
ಕಳೆದ ವರ್ಷ NIA ದಾಖಲಿಸಿದ ಮೂರು ಪ್ರತ್ಯೇಕ ಪ್ರಕರಣಗಳಿಗೆ (RC 37, 38, 39/2022/NIA/DLI)ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗುತ್ತಿದೆ .
ಏಜೆನ್ಸಿ ಈ ವರ್ಷದ ಜನವರಿ 25 ರಂದು ಉತ್ತರ ಪ್ರದೇಶದ ಗೋರಖ್‌ಪುರದಿಂದ RC-37/2022/NIA/DLI ಪ್ರಕರಣದಲ್ಲಿ ಮೇ 2022 ರಲ್ಲಿ ಮೊಹಾಲಿಯಲ್ಲಿ ಪಂಜಾಬ್ ಪೊಲೀಸ್ ಗುಪ್ತಚರ ಕೇಂದ್ರ ಕಚೇರಿಯ ಮೇಲೆ RPG ದಾಳಿಯ ಪ್ರಮುಖ ಶೂಟರ್ ದೀಪಕ್ ರಂಗನನ್ನು ಬಂಧಿಸಿತು.