Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ
    ಕರಾವಳಿ ಸುದ್ದಿ

    ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ

    May 19, 2023
    Share

    ಕೊಚ್ಚಿ: ತನ್ನನ್ನು ಮದುವೆಯಾಗುವಂತೆ ವಿವಾಹಿತ ಮೇಕಪ್ ಆರ್ಟಿಸ್ಟ್‌ವೊಬ್ಬಳನ್ನು‌ ವಿವಾಹಿತ ಪ್ರಿಯಕರ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್ನಲ್ಲಿರುವ ಲಾಡ್ಜ್‌ವೊಂದರಲ್ಲಿ ನಡೆದಿದೆ.

    ಉದ್ಮಾ ಪಂಚಾಯಿತಿಯ ಮುಕ್ಕುನೋಥ್ ನಿವಾಸಿ ಪಿ.ಬಿ. ದೇವಿಕಾ (34) ಕೊಲೆಯಾದ ಮಹಿಳೆ. ಹಂತಕ ಪ್ರಿಯಕರ ಸತೀಶ್ (36) ಕೊಲೆ ಮಾಡಿದ ಬಳಿಕ ಲಾಡ್ಜ್ ರೂಮ್ ಲಾಕ್ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆರೋಪಿ ಸತೀಶ್ ಮುಲ್ಲಿಯಾರ್ ಗ್ರಾಮ ಪಂಚಾಯಿತಿಯ ಬೊವಿಕನಮ್ ಮೂಲದ ನಿವಾಸಿ. ಈತ ಕನ್ಹಂಗಾಡ್ ಪಟ್ಟಣದಲ್ಲಿ ಖಾಸಗಿ ಸೆಕ್ಯುರಿಟಿ ಏಜೆನ್ಸಿ ನಡೆಸುತ್ತಿದ್ದಾನೆ. ಈಗಾಗಲೇ ಈತನಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ದೇವಿಕಾಗೂ ಮದುವೆ ಆಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿಗೆ ಡಿವೋರ್ಸ್ ನೀಡಿ ತನ್ನೊಂದಿಗೆ ಇರುವಂತೆ ದೇವಿಕಾ ಒತ್ತಾಯ ಮಾಡುತ್ತಿದ್ದಳು.

    ಹೀಗಾಗಿ ಆಕೆಯನ್ನು ಕೊಲೆ ಮಾಡಿರುವುದಾಗಿ ಸತೀಶ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ತಿಂಗಳಿನಿಂದ ಸತೀಶ್ ಲಾಡ್ಜ್ನಲ್ಲಿ ವಾಸವಿದ್ದ. ಕನ್ಹಂಗಾಡ್ನಿಂದ 20 ಕಿಮೀ ದೂರದಲ್ಲಿರುವ ತನ್ನ ಊರಿನಿಂದ ದೇವಿಕಾ ಲಾಡ್ಜ್ಗೆ ಬಂದಿದ್ದಳು. CITU ಗೆ ಸಂಯೋಜಿತವಾಗಿರುವ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಲು ಕನ್ಹಂಗಾಡ್ಗೆ ಬಂದಿದ್ದಳು. ಸಮಾವೇಶ ಬಳಿಕ ಸತೀಶ್ನನ್ನು ಭೇಟಿ ಮಾಡಿ, ಆತನೊಂದಿಗೆ ಲಾಡ್ಜ್ಗೆ ತೆರಳಿದ್ದಾಗ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 241

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.