Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬದಲಾದ ಸರಕಾರ: ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ..!
    ಇತ್ತೀಚಿನ ಸುದ್ದಿ

    ಬದಲಾದ ಸರಕಾರ: ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ..!

    May 27, 2023
    Share

    ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.

    ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು.

    ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಅವರು ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ‘ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ತಮ್ಮನ್ನು ಮುಂದುವರಿಸಲು ನೂತನಕುಮಾರಿ ಅವರು ಕೋರಿದರೆ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

    Post Views: 257

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.