ಬೆಂಗಳೂರು;ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಶಾಂತಿ ಕದಡುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು.ಇದರ ಬೆನ್ನಲ್ಲೇ ಬಜರಂಗದಳ ನಿಷೇಧ ಕುರಿತು ಚರ್ಚೆ ನಡೆದಿತ್ತು.
ಚುನಾವಣೆ ಬಳಿಕ ಮೊನ್ನೆಯಷ್ಟೇ ಪ್ರಿಯಾಂಕ ಖರ್ಗೆ ಅವರು
ಶಾಂತಿ ಕದಡಿದರೆ ಆರೆಸ್ಸೆಸ್, ಬಜರಂಗದಳ ಎಂದು ನೋಡುವುದಿಲ್ಲ.ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಭಜರಂಗದಳ, ಆರ್‌ಎಸ್‌ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಎಂದು ಹೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ ಖರ್ಗೆ- ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ, ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿಯನ್ನು ನಾವು ತೋರಿಸುತ್ತೇವೆ ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ ಖರ್ಗೆ,
ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ.ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ.ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ ಎಂದು ಹೇಳಿದ್ದಾರೆ.