ನವದೆಹಲಿ: ನೂತನ ಸಂಸತ್ ಭವನ ಸೆಂಟ್ರಲ್ ವಿಸ್ತಾದ ಉದ್ಘಾಟನಾ ಕಾರ್ಯಕ್ರಮ ನಡೆಯಲು ಸಿದ್ದತೆ ಆಗುತ್ತಿದ್ದು, ಇತ್ತ ಸಂಸತ್ ಭವನದ ಉದ್ಘಾಟನೆಯ ಮುನ್ನಾ ದಿನ ರಾಜದಂಡ `ಸೆಂಗೋಲ್’ ಅನ್ನು ಪ್ರಧಾನಿ ನರೇಂದ್ರ ಮೋದಿ ಗೆ ಹಸ್ತಾಂತರ ಮಾಡಲಾಗಿದೆ.
ಲೋಕಸಭೆ ಸ್ಪೀಕರ್ ಕುರ್ಚಿ ಪಕ್ಕದಲ್ಲಿ ರಾಜದಂಡ ಅಳವಡಿಸಲಾಗಿದ್ದು, ಸುದೀರ್ಘ ಇತಿಹಾಸ ಹೊಂದಿರುವ ಚಿನ್ನದ ರಾಜದಂಡ ಇದಾಗಿದೆ.ಸಂಸತ್ ಭವನ ಉದ್ಘಾಟನೆಗೆ ರಾಜ್ಯದ ಪುರೋಹಿತರ ನೇತೃತ್ವ ವಹಿಸಿದ್ದು, ಶೃಂಗೇರಿಯ ಶಾರದಾ ಪೀಠದ ಪುರೋಹಿತರಿಂದ ಬೆಳಗ್ಗೆ 7:30ರಿಂದಲೇ ಹೋಮ, ಪೂಜಾ ಕೈಂಕರ್ಯ ಆರಂಭವಾಗಿದೆ. ಪ್ರಧಾನಿ ಮೋದಿ ಸಮ್ಮುಖದಲ್ಲಿ ವಿಶೇಷ ಪೂಜೆ, ಹೋಮ-ಹವನ ನಡೆದಿದೆ.ಭಾರತದ ಸ್ವಾತಂತ್ರ‍್ಯವನ್ನು ಗುರುತಿಸುವ ರಾಜದಂಡವನ್ನು ತಯಾರಿಸುವ ಹೊಣೆಯನ್ನು ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ವಹಿಸಿದ್ದರು.